Header Ads
Header Ads
Breaking News

ಉಡುಪಿಯಲ್ಲಿ 64ನೇ ಕನ್ನಡ ರಾಜ್ಯೋತ್ಸವ : ಗೃಹ ಸಚಿವ ಬಸವರಾಜ ಬೊಮ್ಮಾಯಿ ದ್ವಜಾರೋಹಣ

 ಉಡುಪಿಯಲ್ಲಿ 64ನೇ ಕನ್ನಡ ರಾಜ್ಯೋತ್ಸವವನ್ನು ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ ದ್ವಜಾರೋಹಣ ಗೈದರು. ಬಳಿಕ ಪಥ ಸಂಚಲಾನಾರ್ಥಿಗಳ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್.ಸಿ.ಸಿ ಸ್ಕೌಟ್ಸ್ , ಗೈಡ್ಸ್ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಪತ್ರಿಕೋದ್ಯಮ ವಿಭಾಗದಲ್ಲಿ ವಿಜಯಕರ್ನಾಟಕದ ಹಿರಿಯ ವರದಿಗಾರ ಸುಜಿ ಕುರ್ಯ, ಛಾಯಾಗ್ರಹಣದಲ್ಲಿ ಸಂತೋಷ್ ಕುಂದೇಶ್ವರ ಸೇರಿದಂತೆ ಒಟ್ಟು ವಿವಿಧ ಕ್ಷೇತ್ರದ 30 ಸಾಧಕರಿಗೆ ಮತ್ತು ಎರಡು ಸಂಘ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಗೃಹ ಸಚಿವರು ಸೇರಿದಂತೆ ನೆರೆದ ಗಣ್ಯರು ವಿತರಿಸಿದರು. ಶಾಸಕ ರಘುಪತಿಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ ಸಿ.ಇ.ಒ ಪ್ರೀತಿ ಗೆಹ್ಲೋಟ್,ಜಿ.ಪಂ ಅಧ್ಯಕ್ಷ ದಿನಕರ ಬಾಬು ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *