Header Ads
Header Ads
Breaking News

ಉಡುಪಿಯಾದ್ಯಂತ ಧಾರಾಕಾರ ಮಳೆ ಶಾಲೆಗಳಿಗೆ ರಜೆ ಘೋಷಣೆ

ಮುಂಗಾರು ಮಳೆ ಚುರುಕುಗೊಂಡಿದ್ದು, ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಿಗ್ಗೆಯಿಂದ ಗಾಳಿಯಿಂದ ಕೂಡಿದ ಮಳೆಯಾಗುತ್ತಿದು , ಮಳೆಗಾಲದ ಆರಂಭವನ್ನು ಸಾರುತ್ತಿದೆ.ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಇವತ್ತು ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ರಜೆ ಘೋಷಿಸಿದ್ದಾರೆ. ಕಡಲ ಅಲೆಗಳು ಧುಮ್ಮಿಕ್ಕುತ್ತಿದ್ದು ,ಮೀನುಗಾರರಿಗೂ ಕಡಲಿಗಿಳಿಯದಂತೆ ಸೂಚಿಸಲಾಗಿದೆ.ಈಗಾಗಲೇ ಆಳಸಮುದ್ರ ಮೀನುಗಾರಿಕೆ ಸ್ಥಗಿತಗೊಂಡಿದ್ದು ,ನಾಡದೋಣಿ ಮೀನುಗಾರರಿಗೆ ಜಾಗರೂಕರಾಗಿರುವಂತೆ ಎಚ್ಚರಿಕೆ ರವಾನಿಸಲಾಗಿದೆ.  

 

Related posts

Leave a Reply