Header Ads
Header Ads
Breaking News

ಉಡುಪಿಯ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನ : ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರು

ಉಡುಪಿಯ ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈಲು ಬರುವ ವೇಳೆಯನ್ನು ಕಾದುಕುಳಿತು, ಹಳಿಯತ್ತ ಹಾರಿದ್ದಾನೆ. ರೈಲಿನಡಿ ಸಿಲುಕಿದ್ದರೂ ಅದೃಷ್ಟವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಲಗೈನ ಮೂರು ಬೆರಳುಗಳು ತುಂಡಾಗಿವೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಚಂದ್ರಕಾಂತ್ ನಾಯಕ್ ಎಂದು ಗುರುತಿಸಲಾಗಿದೆ. ವಿಪರೀತ ಮದ್ಯ ಸೇವನೆ ಮಾಡಿದ್ದು, ಆತ್ಮಹತ್ಯೆಗೆ ಯತ್ನಿಸಲು ಕಾರಣವೇನೆಂದು ತಿಳಿದುಬಂದಿಲ್ಲ. ಈತ ಯಾರೊಂದಿಗೆ ಮಾತನಾಡಲು ಬಯಸುತ್ತಿಲ್ಲ. ಸದ್ಯ ಗಾಯಾಳುವನ್ನು ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

Leave a Reply

Your email address will not be published. Required fields are marked *