Header Ads
Header Ads
Breaking News

ಉಡುಪಿ:ಶಾಲಾ ಮಕ್ಕಳ ರಿಕ್ಷಾಕ್ಕೆ ಕಾರು ಢಿಕ್ಕಿ!

ಉಡುಪಿಯ ಸಂತಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಕಾರೊಂದು ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸಣ್ಣ ಪುಟ್ಟ ಗಾಯಗೊಂಡ ಘಟನೆ ನಡೆದಿದೆ. ಸಂತೆ ಕಟ್ಟೆ ಜಂಕ್ಷನ್ ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಮಾರುತಿ ರಿಡ್ಸ್ ಕಾರು ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಲ್ಲಿ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಇದರಿಂದ ರಿಕ್ಷಾದಲ್ಲಿದ್ದ ಕಲ್ಯಾಣ ಪುರದ ಎರಡು ಆಂಗ್ಲ ಮಾಧ್ಯಮ ಶಾಲೆಗಳ ಏಳು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ರಿಕ್ಷಾ ಚಾಲಕ ಜಾನ್ ಎಂಬವರು ಗಾಯಗೊಂಡಿದ್ದಾರೆ. ರಿಕ್ಷಾದ ಎದುರು ಭಾಗ ನುಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ನಗರ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *