Breaking News

ಉಡುಪಿ ಕಾಲೇಜು ವಿದ್ಯಾರ್ಥಿನಿಗೆ ಕಾರು ಡಿಕ್ಕಿ, ಕಿನ್ನಿಮೂಲ್ಕಿ ಬಳಿ ಗಾಯಗೊಂಡ ವಿದ್ಯಾರ್ಥಿನಿ ಗಂಭೀರ

ಕಾಲೇಜು ವಿದ್ಯಾರ್ಥಿನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಅಶ್ಮಿತ ಗಂಭೀರ ಗಾಯಗೊಂಡ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಈ ಘಟನೆ ಅಂಬಲಪಾಡಿ ಕಡೆಗೆ ವೇಗವಾಗಿ ಚಲಿಸಿದ ಸ್ವಿಫ್ಟ್ ಡಿಸೈರ್ ಕಾರು ಕಾಲೇಜು ಮುಗಿಸಿ ಮನೆಗೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದು ಡಿವೈಡರ್ ತಾಗಿ ಕಾರು ನಿಂತಿದೆ. ಇಷ್ಟೆ ಅಲ್ಲದೇ ಮುಂದೆ ಹೋಗುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾರು ಚಾಲಕನ ನಿರ್ಲಕ್ಷ್ಯ ಕಂಡುಬಂದಿದೆ. ಬಳಿಕ ಸಂಚಾರಿ ಪೊಲೀಸರು ಈ ಬಗ್ಗೆ ಪ್ರಕರಣ ಕೂಡ ದಾಖಲಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳು ವಿದ್ಯಾರ್ಥಿನಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Related posts

Leave a Reply