Header Ads
Header Ads
Breaking News

ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲು : ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ

ಕಾಂಗ್ರೆಸ್-ಜೆಡಿಎಸ್ ಟಿಕೆಟ್ ಚೌಕಾಸಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಪಾಲಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೋಲಿಸಿದರೆ ಜೆಡಿಎಸ್ ದುರ್ಬಲವಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಪೈಪೋಟಿ ನೀಡುವ ಶಕ್ತಿ ಕಾಂಗ್ರೆಸ್ ಗೆ ಇದ್ದರೂ ಇಂದಿರಾ ಗಾಂಧಿ ಗೆದ್ದು ಪ್ರಧಾನಿಯಾದ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟಿ ಕೊಟ್ಟಿರುವುದು ಒಂದೆಡೆ ಅಚ್ಚರಿ ಮೂಡಿಸಿದರೂ ಈ ಕ್ಷೇತ್ರದಲ್ಲಿ ನೆಲೆ ಕಾಣಲು ಹೆಣಗಾಡುತ್ತಿರುವ ಜೆಡಿಎಸ್ ಈ ಕ್ಷೇತ್ರವನ್ನು ಒಪ್ಪಿಕೊಂಡಿದ್ದಾದರೂ ಏಕೆ ?ಎಂಬ ಪ್ರಶ್ನೆ ಮೂಡುತ್ತಿದೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್

ಟಿಕೆಟ್ ಆಕಾಂಕ್ಷಿ ಯಾಗಿರುವ ಎಐಸಿಸಿ ಸದಸ್ಯ ಅಮೃತ್ ಶೆಣೈ, ಟಿಕೆಟ್ ಸಿಗದಿದ್ದರೆ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷೇತರ ಆಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಈ ಮಧ್ಯೆ ಕ್ಷೇತ್ರದಿಂದ ಮತ್ತೊಬ್ಬರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಡಾ ಆರತಿ ಕೃಷ್ಣ ಅವರಿಗೆ ಜೆಡಿಎಸ್ ಅಧ್ಯಕ್ಷ ಎಚ್.ಡಿ. ದೇವೇಗೌಡರು ದೂರವಾಣಿ ಕರೆ ಮಾಡಿ ಸ್ಪರ್ಧೆಗೆ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೆ ಆರತಿಯವರು ದಿಲ್ಲಿಗೆ ತೆರಳಿ ಕಾಂಗ್ರೆಸ್‌ನಿಂದ ಟಿಕೆಟ್ ಗೆ ಪ್ರಯತ್ನಿಸುತ್ತಾರೆನ್ನಲಾಗಿದೆ.

Related posts

Leave a Reply

Your email address will not be published. Required fields are marked *