Header Ads
Header Ads
Header Ads
Header Ads
Header Ads
Header Ads
Breaking News

ಉಡುಪಿ ಜಿಲ್ಲಾಡಳಿತದ ವತಿಯಿಂದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿಯು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ ಜಿಲ್ಲಾ ಬಿಲ್ಲವ ಸಮುದಾಯ ಭವನದಲ್ಲಿ ನಡೆಯಿತು.  ಕಾರ್ಯಕ್ರಮದ ಉದ್ಘಾಟನೆಯನ್ನು ಮುಜರಾಯಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಕರ್ನಾಟಕ ಸರ್ಕಾರ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದ್ರು. 

ಬಳಿಕ ಮಾತನಾಡಿ ನಾರಾಯಣಗುರು ಜಯಂತಿ ಸರಕಾರಿ ಕಾರ್ಯಕ್ರಮವಾಗಿ ಆಚರಣೆ ಮಾಡುತ್ತಿರೋದು ಸಮಸ್ತ ಬಿಲ್ಲವರಿಗೆ ಸಂತಸ ತಂದಿದೆ. ಈ ಬಾರಿ ನಾರಾಯಣಗುರು ಜಯಂತಿ ಆಚರಣೆ ಕಡಿಮೆ ವೆಚ್ಚದಲ್ಲಿ ಆಚರಣೆ ಮಾಡುತ್ತಿದ್ದು, ಹಣವನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ನೀಡಲಾಗುವುದು ಎಂದರು. ಈ ಸಂದರ್ಭ ಸರಕಾರಿ ಅಧಿಕಾರಿಗಳು ಜನಪ್ರತಿನಿಧಿಗಳು ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *