Breaking News

ಉಡುಪಿ ಜಿಲ್ಲಾಧಿಕಾರಿ ಕಚೇರಿ, ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರರಾವ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕುರಿತಂತೆ ಪರಿಶೀಲನೆ ನಡೆಸಿದ ಮುಖ್ಯ ಕಾರ್ಯದರ್ಶಿಗಳು, ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣ ಮತ್ತು ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಅಮೃತ್ ಯೋಜನೆ ಮತ್ತು ಯುಜಿಡಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಗುರುತಿಸಿ ಕಾಮಗಾರಿ ಪ್ರಾರಂಭಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಡೆಂಗ್ಯು ಮತ್ತು ಮಲೇರಿಯ ಪ್ರಕರಣಗಳು ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು ತೆರೆದ ಕೊಳವೆ ಬಾವಿಗಳನ್ನು ಸಮರ್ಪಕ ರೀತಿಯಲ್ಲಿ ಮುಚ್ಚುವಂತೆ ಸೂಚಿಸಿದರು.

Related posts

Leave a Reply