Header Ads
Header Ads
Breaking News

ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ ಮಾ.11ರಂದು ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಆಯೋಜನೆ

ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಾವೇಶ ಮಾ.11ರಂದು ಬನ್ನಂಜೆ ಶ್ರೀ ನಾರಾಯನಗುರು ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅದ್ಯಕ್ಷ ಯತೀಶ್ ಕರ್ಕೇರಾ ಮತ್ತು ಪ್ರಖ್ಯಾತ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯ ಹಿನ್ನಲೆಯಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್, ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಮಾರ್ಗದರ್ಶನದಂತೆ ಸಮಾವೇಶ ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಉದ್ಘಾಟಿಸಲಿದ್ದು ಅದ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಜನಾರ್ಧನ ತೋನ್ಸೆ ವಹಿಸಲಿದ್ದಾರೆ. ಬಳಿಕ ಮಹಿಳಾ ಸಂಘಟನೆಗಳಿಂದ ಜಿಲ್ಲಾ ಮಟ್ಟದ ಸಮೂಹ ನೃತ್ಯ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ವರದಿ:ಪಲ್ಲವಿ ಸಂತೋಷ್

Related posts

Leave a Reply