Header Ads
Header Ads
Breaking News

ಉಡುಪಿ ಜಿಲ್ಲಾ ನೋಂದಣಿಯ ವಾಹನಗಳಿಂದ ಟೋಲ್ ಸಂಗ್ರಹವನ್ನು ವಿರೋಧಿಸಿ ಪ್ರತಿಭಟನೆ

ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದರಿಂದ ಟೋಲ್ ಸಂಗ್ರಹಕ್ಕೆ ಸಂಬಂಧಿಸಿ ನ.28ರಂದು ಸಭೆ ಕರೆಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಸಭೆ ನಡೆಸುವವರೆಗೆ ಕೆ.ಎ.20 ನೋಂದಣಿಯ ವಾಹನಗಳಿಂದ ಟೋಲ್ ಸಂಗ್ರಹ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಟೋಲ್ ಸಂಗ್ರಹಕ್ಕೆ ಅಡ್ಡಿಪಡಿಸಿದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಅಧ್ಯಕ್ಷ ಪ್ರತಾಪ್ ಶೆಟ್ಟಿ, ಜಿಲ್ಲಾ ಲಾರಿ ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಕಾವೇರಿ, ಸಮಿತಿಯ ಕಾರ್ಯದರ್ಶಿ ವಿಠಲ ಪೂಜಾರಿ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸ್ಥಳದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಡಿವೈಎಸ್ಪಿಗಳಾದ ಜೈಶಂಕರ್, ದಿನೇಶ್ ಕುಮಾರ್ ಹಾಜರಿದ್ದರು.

Related posts

Leave a Reply