Header Ads
Header Ads
Header Ads
Breaking News

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನೇಮಕದಲ್ಲಿ ಮಾರ್ಪಾಡು : ಅಕ್ಷಯ್ ಮಚ್ಚೀಂದ್ರ ಅವರನ್ನು ಕೈಬಿಟ್ಟು ಎನ್.ವಿಷ್ಣುವರ್ಧನ್ ನೇಮಕ

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನೇಮಕ ಆದೇಶದಲ್ಲಿ ಮಾರ್ಪಾಡುಗೊಳಿಸಿರುವ ರಾಜ್ಯ ಸರಕಾರ, ಅಕ್ಷಯ್ ಮಚ್ಚೀಂದ್ರ ಅವರನ್ನು ಕೈಬಿಟ್ಟು ಬೆಂಗಳೂರು ನಗರ ಡಿಸಿಪಿ(ಆಡಳಿತ) ಆಗಿದ್ದ ಎನ್.ವಿಷ್ಣುವರ್ಧನ್ ಅವರನ್ನು ನೂತನ ಜಿಲ್ಲಾ ಪೊಲೀಸ್ಅಧೀಕ್ಷಕರಾಗಿ ನಿಯುಕ್ತಿಗೊಳಿಸಿದೆ.

2015ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿರುವ ವಿಷ್ಣುವರ್ಧನ್, ಮೂರು ವರ್ಷಗಳ ಹಿಂದೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ಅಧೀಕ್ಷಕರಾಗಿ ಒಂದೂವರೆ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಮೈಸೂರು ಎಸ್ಪಿಯಾಗಿ ವರ್ಗಾವಣೆಗೊಂಡಿದ್ದರು. ಸರಕಾರ ಡಿ.31ರಂದು ರಾತ್ರಿ ಹೊರಡಿಸಿದ ಆದೇಶದಂತೆ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಲು ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಇಂದು ಬೆಳಗ್ಗೆ ಉಡುಪಿ ಎಸ್ಪಿ ಕಚೇರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭ ಸರಕಾರ ಆದೇಶವನ್ನು ಮಾರ್ಪಾಡುಗೊಳಿಸಿರುವುದರಿಂದ ಅಕ್ಷಯ್ ಮಚ್ಚೀಂದ್ರ ಅಧಿಕಾರ ಸ್ವೀಕರಿಸಿರಲಿಲ್ಲ.

ಇದೀಗ ಅಕ್ಷಯ್ ಮಚ್ಚೀಂದ್ರ ಅವರನ್ನು ಸರಕಾರ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಡಿ.31ರಂದು ಆದೇಶ ಹೊರಡಿಸಿದೆ.

Related posts

Leave a Reply

Your email address will not be published. Required fields are marked *