Header Ads
Breaking News

ಉಡುಪಿ ಜಿಲ್ಲೆಯಲ್ಲಿ 144(3) ನಿಷೇಧಾಜ್ಞೆ ಜಾರಿ : ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ ಪ್ರವೇಶ ನಿಷೇಧ

ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉಡುಪಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ 144 (3) ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ಹೊರಡಿಸಿದ್ದಾರೆ.

ಕೊರೋನಾ ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜರುಗುವ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಜಾತ್ರೆಗಳು ಸಭೆ ಸಮಾರಂಭಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ಸಂತೆ ಜಾತ್ರೆ ಉತ್ಸವ, ಸಾಮೂಹಿಕ ವಿವಾಹಗಳು ಹಾಗೂ ಇನ್ನಿತರ ಜನಸಂದಣಿ ಸೇರು ಕಾರ್ಯಕ್ರಮಗಳಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚು ಇರುವ ಕಾರಣದಿಂದ ಸರ್ಕಾರದ ಆದೇಶದಂತೆ ಮಾರ್ಚ್ 18ರಿಂದ ಸಿ ಆರ್ ಪಿ ಸಿ ಸೆಕ್ಷನ್ 114(3) ಜಾರಿ ಮಾಡಲಾಗಿದೆ.

ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಿದೆ. ಅಲ್ಲದೆ ವಾರದ ಸಂತೆಗಳನ್ನು ಕೂಡ ನಿರ್ಬಂಧಿಸಿದೆ.

Related posts

Leave a Reply

Your email address will not be published. Required fields are marked *