
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪತಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ವರ್ಗವಾಗಿದ್ದಾರೆ. ಕೊರ್ಲಪಾಟಿ ಪ್ರಸ್ತುತ ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾಗಿದ್ದಾರೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಇದಕ್ಕೂ ಮುನ್ನ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶಾನುಸಾರ ವರ್ಗಾವಣೆಯಾಗಿದೆ.