Header Ads
Header Ads
Breaking News

ಉಡುಪಿ ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್‌ನಿಂದ ಕೊಡುಗೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಉಡುಪಿ ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ ವತಿಯಿಂದ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಸಮಾಜದ ಪ್ರತಿಭಾವಂತ ಮತ್ತು ಆರ್ಥಿಕ ಹಿಂದುಳಿದ 1900 ವಿದ್ಯಾರ್ಥಿಗಳಿಗೆ 2018-19 ನೇ ಸಾಲಿನ ವಿದ್ಯಾರ್ಥಿ ವೇತನ ಸಮಾರಂಭ ನಡೆಯಿತು.

ಅಂಬಲಪಾಡಿ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಬ್ಯಾಂಕ್ ಆಫ್ ಬರೋಡಾದ ಮಂಗಳೂರು ವಲಯದ ಮಹಾ ಪ್ರಬಂಧಕ ಎಂ.ಜೆ ನಾಗರಾಜ್ ಉದ್ಘಾಟಿಸಿದರು. ವಿದ್ಯಾರ್ಥಿಗಳು ದಿನ ಪತ್ರಿಕೆಯನ್ನು ಓದುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಜ್ಞಾನ ವೃದ್ಧಿ ಜೊತೆ ಭಾಷೆ ಮೇಲೆ ಹಿಡಿತ ಸಾಧಿಸಲು ಸಾದ್ಯವಾಗುತ್ತದೆ ಎಂದರು. ಎಸ್.ಎಸ್. ಎಲ್.ಸಿಯಲ್ಲಿ ಅತ್ಯಧಿಕ ಅಂಕ ಪಡೆದ ಪಲ್ಲವಿ, ಮನ್ವಿತ್ ಪ್ರಭು, ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ನಿವೇದಿತಾ, ಪ್ರತೀಕ್ಷಾ, ರಾಯೀಶ್ ಮತ್ತು ಸ್ವಾತಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬ್ಯಾಂಕ್ ಆಫ್ ಬರೋಡಾದ ಉಡುಪಿ ಪ್ರಾದೇಶಿಕ ಶಾಖೆಯ ಉಪ ಮಹಾಪ್ರಬಂಧಕ ರವೀಂದ್ರ ರೈ ವಿದ್ಯಾರ್ಥಿ ವೇತನ ವಿತರಿಸಿದರು. ಸಮಾರಂಭದಲ್ಲಿ ಅಶಕ್ತ ಯಕ್ಷಾಗಾನ ಕಲಾವಿದರಿಗೆ ಸಹಾಯಧನ ವಿತರಿಸಲಾಯಿತು. ಸಮಾರಂಭದ ಅದ್ಯಕ್ಷತೆ ವಹಿಸಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ ಶಂಕರ್ ಮಾತನಾಡಿದರು. ಸಮಾರಂಭದಲ್ಲಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ್ ಕರ್ಕೇರ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *