Header Ads
Header Ads
Breaking News

ಉಡುಪಿ ಸಂತಕಟ್ಟೆಯಲ್ಲಿ ಭೀಕರ ಅಪಘಾತ ಕಾರು ಮತ್ತು ಟೆಂಪೊ ನಡುವೆ ನಡೆದ ಅಪಘಾತ

ಸಂತಕಟ್ಟೆ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಟೆಂಪೋ ಚಾಲಕ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಮೃತರನ್ನು ಸುಂದರ ನಾಯಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಡಿವೈಡರ್ ದಾಟಿ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆಯಿತು ಎಂದು ತಿಳಿದು ಬಂದಿದೆ. ಇದರಿಂದ ಟೆಂಪೊ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

Leave a Reply