Header Ads
Breaking News

ಉಡುಪಿ ಸಮಾಜ ಸೇವಕರಿಂದ ಮನನೊಂದ ಯುವಕನ ರಕ್ಷಣೆ

ಉಡುಪಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿದ್ದ, ಅಪರಿಚಿತ ಯುವಕನನ್ನು ಕುಕ್ಕಿಕಟ್ಟೆ ರೈಲ್ವೆ ಸೇತುವೆ ಬಳಿ ರಕ್ಷಿಸದ ಘಟನೆ ನಡೆದಿದೆ. ರೈಲು ಸೇತುವೆ ಬಳಿ ಅನುಮಾನಸ್ಪದವಾಗಿ ಸುತ್ತಾಡುತ್ತಿದ್ದ ಯುವಕನನ್ನು ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ಅವರು ಗಮನಿಸಿದ್ದಾರೆ. ನಂತರ ಅವರು ಯುವಕನ ವಿಚಾರಿಸಿದಾಗ, ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಬಂದಿರುವುದಾಗಿ ಹೇಳಿಕೊಂಡಿದ್ದಾನೆ. ತಕ್ಷಣ ರಾಘವೇಂದ್ರ ಪ್ರಭು ಕರ್ವಾಲು ಅವರು ಯುವಕನ ನಡವಳಿಕೆಯಲ್ಲಿ ಅನುಮಾನಪಟ್ಟು, ಉಡುಪಿಯ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಪಂದಿಸಿದ ಸಮಾಜಸೇವಕರು ಯುವಕನ ಕುಕ್ಕಿಕಟ್ಟೆ ರೈಲ್ವೆ ಸೇತುವೆ ಬಳಿ ರಕ್ಷಿಸಿದ್ದಾರೆ. ಕೆಲವು ದಿನಗಳಿಂದ ಅನ್ನ ಆಹಾರ ಇಲ್ಲದೆ ಹಸಿದಿರುವ ಯುವಕನಿಗೆ ಆಹಾರದ ವ್ಯವಸ್ಥೆಗೊಳಿಸಿದ್ದಾರೆ. ನಂತರ ಕಟಪಾಡಿಯಲ್ಲಿರುವ ಕಾರುಣ್ಯ ಅನಾಥರ ಆಶ್ರಮದಲ್ಲಿ ನೆಲೆ ಕಲ್ಪಿಸಿದ್ದಾರೆ. ಆಶ್ರಮ ಸಂಚಾಲಕ ಕುಮಾರ್ ಅವರು ಮನನೊಂದ ಯುವಕನಿಗೆ ಆಶ್ರಯ ಒದಗಿಸಿ ಮಾನವಿಯತೆ ಮೆರೆದಿದ್ದಾರೆ.

ಯುವಕನು ಮಾನಸಿಕ ಖಿನ್ನತೆಗೆ ಒಳಪಟ್ಟಂತೆ ಕಂಡುಬಂದಿದ್ದು, ಕೊಂಕಣಿ, ಕನ್ನಡ ಬಾಷೆ ಬಲ್ಲವನಾಗಿದ್ದಾನೆ. ಗೌಡ ಸಾರಸ್ವತ ಸಮಾಜದ ವ್ಯಕ್ತಿ ಎಂದು ಹೇಳಿಕೊಂಡಿದ್ದಾನೆ. ಯುವಕನಿಗೆ ಮಾನಸಿಕ ಚಿಕಿತ್ಸೆ ಒದಗಿಸ ಬೇಕಾಗಿದ್ದು ಸಮಾಜದ ಸಂಘ ಸಂಸ್ಥೆಗಳು ನೆರವಿಗೆ ಮುಂದೆ ಬರಬೇಕಾಗಿದೆ. ವಾರಸುದಾರರು ತುರ್ತಾಗಿ ಉಡುಪಿ ಕಟಪಾಡಿಯ ಕಾರುಣ್ಯ ಆಶ್ರಮವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Related posts

Leave a Reply

Your email address will not be published. Required fields are marked *