Header Ads
Header Ads
Breaking News

ಉಡುಪಿ : ಸಿಂಡಿಕೇಟ್ ಬ್ಯಾಂಕಿನ ಬ್ರಾಂಚಿಗೆ ಬೆಂಕಿ

ಉಡುಪಿ ಜಿಲ್ಲೆಯ ಹೆಬ್ರಿ ಆಗುಂಬೆ ಮುಖ್ಯ ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಗೆ ಬೆಂಕಿ ತಗುಲಿ,ಬ್ಯಾಂಕ್ ನ ಒಳಗೆ ಇದ್ದ ದಾಖಲೆಗಳು ಮತ್ತು ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಸಿಂಡಿಕೇಟ್ ಬ್ಯಾಂಕ್ ನ ಒಳಗೆ ಶಾಕ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಒಳಗೆ ಇದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್ ಮಾಹಿತಿ ತಿಳಿದ ಕಾರ್ಕಳದ ಅಗ್ನಿ ಶಾಮಕ ದಳವರು ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ಸೂಕ್ತ ಕಾರಣದ ತನಿಖೆ ನಡೆಸುತ್ತಿದ್ದಾರೆ. 

Related posts

Leave a Reply