Header Ads
Header Ads
Header Ads
Header Ads
Header Ads
Header Ads
Breaking News

ಉತ್ತಮ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಪತ್ರ : ಯು.ಟಿ. ಖಾದರ್ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ ಅಂತಾ ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಹೇಳಿದ್ರು .ಈ ಕುರಿತು ಮಂಗಳೂರಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಇನ್ನು ಜಿಲ್ಲೆಯ ಸ್ಯಾಂಡ್ ಬಜಾರ್‌ಆಫ್ ರಾಜ್ಯದಲ್ಲಿ ಮಾದರಿಯಾಗಿದೆ. ಮರಳು ಮಾಫಿಯಾ, ಇಸ್ವಿಟ್ ಕ್ಲಬ್ ಮುಂತಾದ ಅಕ್ರಮ ಚಟುವಟಿಕೆಗಳು ಕಡಿಮೆಯಾಗಿದೆ.

ಇದಕ್ಕೆ ಜಿಲ್ಲೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ.ಹಾಗಾಗಿ ಜಿಲ್ಲೆಯ ಉತ್ತಮ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ಸ್ವಂತ ವಿಚಾರಕ್ಕಾಗಿ ವರ್ಗಾವಣೆ ಮಾಡುವುದು ಜಿಲ್ಲೆಯ ಹಿತ ದೃಷ್ಟಿಯಿಂದ ಇದು ಒಳ್ಳೆಯದಲ್ಲ. ಹಾಗಾಗಿ ನಾನು ಸಿಎಂ ಅವರಿಗೆ ಪತ್ರ ಬರೆದಿದ್ದೇನೆ ಅಂತಾ ತಿಳಿಸಿದರು. ನಮ್ಮ ಜಿಲ್ಲೆಯ ನದಿಗಳು ಸುಸೈಡ್ ಪಾಟಿಂಟ್ ಆಗುತ್ತಿದೆ.

ಹಾಗಾಗಿ ಜಿಲ್ಲೆಯ ನದಿಗಳಿಗೆ ಉತ್ತಮ ರೀತಿಯಲ್ಲಿ ತಡೆಗೋಡೆ ಕಟ್ಟಬೇಕು. ಅಲ್ಲದೇ ಲೈಟ್‌ಗಳು ಹಾಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು.ಜಿಲ್ಲೆಯ ನದಿಗಳನ್ನು ಪ್ರವಾಸೋದ್ಯಮ ತಾಣವಾಗಿ ಮಾಡಬೇಕು. ಅದಕ್ಕಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೂಡ ಪತ್ರ ಬರೆದಿದ್ದೇನೆ ಎಂದು ಖಾದರ್ ಅವರು ತಿಳಿಸಿದರು.

Related posts

Leave a Reply

Your email address will not be published. Required fields are marked *