Header Ads
Header Ads
Breaking News

ಉದ್ಯಾವರ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉದ್ಯಾವರ ಅಂಕುದ್ರುವಿನಲ್ಲಿರುವ ಮನೆಯಲ್ಲಿ ವ್ಯಕ್ತಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ. ವ್ಯಕ್ತಿಯು ಮೃತಪಟ್ಟು ಕೆಲವು ದಿನಗಳು ಕಳೆದಿರ ಬಹುದೆಂದು ಅಂದಾಜಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಐವನ್ ಲೂವಿಸ್ (50ವ) ಎಂದು ಗುರುತಿಸಲಾಗಿದೆ. ಮೃತರು ದರ್ಜಿ ವೃತ್ತಿ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಪು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆ ಒದಗಿಸಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಸಹಕಾರ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *