Breaking News

ಉದ್ಯೋಗ ಖಾತರಿಯಡಿ ಕಿಂಡಿ ಅಣೆಕಟ್ಟು ನಿರ್ಮಾಣ, ನರಿಂಗಾನ ಗ್ರಾಮದ ಮಹಿಳೆಯರ ಅತ್ಯುತ್ತಮ ಸಾಧನೆ


ಮಹಾತ್ಮಾ ಗಾಂಧಿ ರಾಷ್ಟಿ ಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ದಕ ಜಿಲ್ಲೆಯಲ್ಲಿ ಮೊತ್ತ ಮೊದಲಿಗೆ iಹಿಳೆಯರು ಸೇರಿಕೊಂಡು ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾಗಿದ್ದು ಇಡೀ ರಾಜ್ಯಕ್ಕೆ ಹೆಮ್ಮ್ಮೆತರುವ ವಿಚಾರನ್ನು ನರಿಂಗಾನ ಗ್ರಾಮದ ಮಹಿಳೆಯರು ಮಾಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಎಂ. ಆರ್. ರವಿ ಅಭಿಪ್ರಾಯಪಟ್ಟರು.
ಅವರು ಮಹಾತ್ಮಾ ಗಾಂಧಿ ರಾಷ್ಟಿ ಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ನೆತ್ತಿಲಕೋಡಿಯಲ್ಲಿ ಸ್ವಸಹಾಯ ಸಂಘದ ತಂಡದ ಮಹಿಳೆರಿಂದ ನಿರ್ಮಾಣವಾಗುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಬಳಿಕ ಮಾತನಾಡಿದರು. ಮಹಿಳೆಯರು ತಮ್ಮ ಮನೆಗೆಲಸವನ್ನು ಅಚ್ಚುಕಟ್ಟಾಗಿ ಮಾಡುವಂತೆ ಕಿಂಡಿ ಅಣೆಕಟ್ಟನ್ನು ಉತ್ತಮ ರೀತಿಯಲ್ಲಿ ನಿರ್ಮಾಣ ಮಾಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕು ಎಂದರು.
ಜಿಲ್ಲೆಯಾದ್ಯಂತ ೧,೦೦೦ ಕಿಂಡಿ ಅಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಕಳೆದ ವರ್ಷದ ಬರ ಪರಿಸ್ಥಿತಿಯನ್ನು ಮನಗಂಡು ರಾಜ್ಯ ಸರಕಾರ ಮಂಗಳೂರು ಹಾಗೂ ಬಂಟ್ವಾಳ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಕೃಷಿಗೆ ಪೂರಕವಾಗಿ ಅಂತರ್ಜಲ ಹೆಚ್ಚಿಸುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಗಟ್ಟಿ ಮಾತನಾಡಿ ನರಿಂಗಾನ ಗ್ರಾಮ ಮಹಾತ್ಮಾ ಗಾಂಧಿ ರಾಷ್ಟಿ ಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಐದು ಕಿಂಡಿ ಅಣೆಕಟ್ಟು ನಿರ್ಮಿಸಿ ಜಿಲ್ಲೆಗೆ ನರಿಂಗಾನ ಗ್ರಾಮ ಮಾದರಿ ಗ್ರಾಮವಾಗಿ ರೂಪುಗೊಂಡಿದೆ. ಕುರ್ನಾಡು ಪ್ರದೇಶದಲ್ಲಿ ನೀರಿನ ಬರಗಾಲ ಎದುರಾಗಿದ್ದು, ಮಳೆ ಬಂದರೂ ನೀರನ್ನು ಉಳಿಸಲು ಸಾಧ್ಯವಾಗುತ್ತಿಲ್ಲ ಆ ನಿಟ್ಟಿನಲ್ಲಿ ನರಿಂಗಾನ ಗ್ರಾಮದಲ್ಲಿ ಹರಿದು ಹೋಗುವ ನೀರನ್ನು ಉಳಿಸಲು ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್ ಹೆಚ್ಚಿನ ಮುತುವರ್ಜಿ ವಹಿಸಿದೆ. ಇಂತಹ ಅಣೆಕಟ್ಟು ನಿರ್ಮಾಣ ಮಾಡುವ ಮೂಲಕ ನೀರಿನ ಅಂತರ್ಜಲ ಹೆಚ್ಚಿಸಿ ಕೃಷಿ ಹಾಗೂ ಕುಡಿಯಲು ಸಮರ್ಪಕವಾದ ನೀರನ್ನು ಗ್ರಾಮದ ಜನರಿಗೆ ಒದಗಿಸಲು ಸಾಧ್ಯ ಎಂದರು.
ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್. ಆರ್. ಉಮೇಶ್, ಇಲಾಖಾ ಮಟ್ಟದ ಕಾರ್‍ಯ ನಿರ್ವಹಣ ಅಧಿಕಾರಿ ಸಿಪ್ರಿಯನ್ ಮಿರಾಂದ, ಧಯವತಿ, ಮಂಜನಾಡಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಪರಮೇಶ್ವರ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply