Header Ads
Header Ads
Breaking News

ಉದ್ಯೋಗ ಸೃಷ್ಟಿಸದ ಕೇಂದ್ರದ ವಿರುದ್ಧ ಪ್ರತಿಭಟನೆ. ಮುಂದಿನ ತಿಂಗಳಿಂದ ಪ್ರತಿಭಟನೆ ನಡೆಸುವ ಎಚ್ಚರಿಕೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಅಭಯಚಂದ್ರ ಜೈನ ಹೇಳಿಕೆ

ಮೂಡುಬಿದಿರೆ : ಪದೇ ಪದೇ ಪೆಟ್ರೋಲ್, ಡೀಸಲ್, ಗ್ಯಾಸ್ ದರವನ್ನು ಹೆಚ್ಚಿಸಿ ಬಡ, ಮಧ್ಯಮ ವರ್ಗದವರನ್ನು ಸಂಕಷ್ಟಕ್ಕೀಡು ಮಾಡುತ್ತಿರುವ, ರೈತರ ಸಾಲ ಮನ್ನಾ ಮಾಡದೆ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವ, ಹೊಸ ಉದ್ಯೋಗ ಸೃಷ್ಟಿ ಮಾಡುವಲ್ಲಿಯೂ ವಿಫಲವಾಗಿರುವ, ಕೇಂದ್ರ ಸರಕಾರದ ವಿರುದ್ಧ ಮುಂದಿನ ತಿಂಗಳಿನಿಂದ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್ ಎಚ್ಚರಿಸಿದ್ದಾರೆ.ಮೂಡುಬಿದರೆ ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವೈಫಲ್ಯವನ್ನು ವಿವರಿಸಿ ಮಾತನಾಡಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದೆ. ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಜಿಎಸ್‌ಟಿಯನ್ನು ಜಾರಿಗೆ ತರಲು ಮುಂದಾದಾಗ ಬಿಜೆಪಿ ಅದನ್ನು ವಿರೋಧಿಸಿತ್ತು. ಬಿಜೆಪಿ ಪ್ರತಿಭಟನೆ ಮಾಡಿದರೆ ದೇಶಪ್ರೇಮ, ನಾವು ಬಿಜೆಪಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರೆ ಅದನ್ನು ದೇಶದ್ರೋಹಿ ಎಂದು ವ್ಯವಸ್ಥಿತವಾಗಿ ಬಿಂಬಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.ಈ ಸಂದರ್ಭ ಮಾಧ್ಯಮಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಕಾರ್‍ಯದರ್ಶಿ ರತ್ನಾಕರ ಸಿ ಮೊಲಿ, ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

Related posts

Leave a Reply