Header Ads
Header Ads
Breaking News

ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು ಪುತ್ತೂರಿನಲ್ಲಿ ಸಚಿವ ರಮಾನಾಥ ರೈ ಹೇಳಿಕೆ

ಉತ್ತರಪ್ರದೇಶದಲ್ಲಿ ನಡೆದ ಉಪ ಚುನಾವಣೆಯಲ್ಲಿ ಸೋಲುಂಡ ಬಳಿಕ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಯೋಗಿ ಆದಿತ್ಯನಾಥ ಮಲಗಿದ್ದು, ಇನ್ನು ಏಳುವುದು ಕಷ್ಟ ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು.

ಪುತ್ತೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷಕ್ಕೆ ಇತ್ತೀಚೆಗೆ ದೇಶದಾದ್ಯಂತ ನಡೆದ ಎಲ್ಲಾ ಚುನಾವಣೆಗಳಲ್ಲಿ ಸೋಲಾಗಿದೆ. ಸುಳ್ಳು ಹೇಳಿ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಜನತೆ ತೋರಿಸಿಕೊಟ್ಟಿದ್ದಾರೆ. ಉತ್ತರಪ್ರದೇಶದಲ್ಲಿ ಆದ ಈ ಬದಲಾವಣೆ ರಾಜ್ಯದಲ್ಲಿ ಮುಂದೆ ನಡೆಯುವ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ರಾಜ್ಯದ ಸ್ಟಾರ್ ಕ್ಯಾಂಪೇನರ್ ಎಂದು ಬಿಜೆಪಿಯವರಿಂದ ಗುರುತಿಸಲ್ಪಟ್ಟಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಲಿನಿಂದ ಮಲಗಿದ್ದಾರೆ. ಇನ್ನು ಅವರು ಏಳುವುದು ಕಷ್ಟ ಎಂದು ಅವರು ಇದೇ ಸಂದರ್ಭದಲ್ಲಿ ವ್ಯಂಗ್ಯವಾಡಿದರು.
ವರದಿ: ಪ್ರವೀಣ್ ಪುತ್ತೂರು