Header Ads
Header Ads
Breaking News

ಉಪಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ : ಶೋಭಾ ಕರಂದ್ಲಾಜೆ ಹೇಳಿಕೆ

ಅಧಿಕಾರ ಕಳೆದುಕೊಂಡ ನಂತ್ರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳ್ಕೊಂಡಿದ್ದಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ಉಡುಪಿಯಲ್ಲಿ ಬಿಜೆಪಿ- ಜೆಡಿಎಸ್ ಒಳಒಪ್ಪಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‍ನ್ನು ಬ್ಲಾಕ್‍ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯಗೆ ಯಾವುದೇ ಹಿಡಿತ ಇಲ್ಲ. ಕಾಂಗ್ರೆಸ್‍ನಲ್ಲಿ ಅನೇಕ ಬಣಗಳಾಗಿವೆ. ಸಿದ್ದರಾಮಯ್ಯ ಬಣ, ಜೆಡಿಎಸ್‍ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿ.ಕೆ.ಶಿ ಅವರದ್ದು ಬೇರೆಯೇ ಬಣಗಳಾಗಿವೆ. ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ. ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ. ಮೂರುವರೆ ವರ್ಷಗಳ ಕಾಲ ಬಿಜೆಪಿಯೇ ಆಡಳಿತ ಮಾಡುತ್ತೆ ಎಂದು ಹೇಳಿದ್ರು. ಇನ್ನು ಡಿಕೆಶಿ ಬಿಡುಗಡೆಯಿಂದ ಉಪಚುನಾವಣೆ ಮೇಲೆ ಪ್ರಭಾವ ಇಲ್ಲ. ಡಿಕೆಶಿ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ. ಡಿಕೆಶಿ ಪ್ರಭಾವ ಇದ್ರೂ 104ಸ್ಥಾನ ಗೆದ್ದಿದ್ದೆವು. ಕನಕಪುರದಲ್ಲಿ ಡಿಕೆಶಿ ಪ್ರಭಾವ ಇರಬಹುದು. ಆದರೆ ರಾಜ್ಯದಲ್ಲಿ ಎಲ್ಲೂ ಡಿಕೆಶಿ ಪ್ರಭಾವ ಇಲ್ಲ ಅಂತ ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿದ್ರು.

Related posts

Leave a Reply

Your email address will not be published. Required fields are marked *