Header Ads
Header Ads
Breaking News

ಉಪಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಗೆಲುವು ಹಿನ್ನೆಲೆ:ಮಂಗಳೂರಲ್ಲಿ ಕಾಂಗ್ರೆಸ್ – ಜೆಡಿಎಸ್ ಸಂಭ್ರಮಾಚರಣೆ

ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೇತೃತ್ವದಲ್ಲಿ ಪಟಾಕಿ ಹಾಗೂ ಸಿಹಿ ಹಂಚುವ ಮೂಲಕ ಸಂಭ್ರಮಾಚಿಸಲಾಯ್ತು. ನಗರದ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ರು. ಈ ವೇಳೆ ಮಾತನಾಡಿದ ಐವನ್ ಡಿಸೋಜಾ,ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟ ಕ್ಕೆ ಸಂದ ಜಯವಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ 25 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ.ಮೂಲಕ ಕೇಂದ್ರ ಸರ್ಕಾರದ ಜನವಿರೋಧಿ ಸರ್ಕಾರಕ್ಕೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಈ ವೇಳೆ ಪಾಲಿಕೆ ಉಪಮೇಯರ್ ಕೆಮಹಮ್ಮದ್, ಕಾಂಗ್ರೆಸ್ ಮುಖಂಡ ಕೋಡಿಜಾಳ್ ಇಬ್ರಾಹಿಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Related posts

Leave a Reply