Header Ads
Breaking News

ಉಪಚುನಾವಣೆ ಗೆಲುವು ನಮಗೆ ಹರ್ಷ ತಂದಿದೆ : ಉಡುಪಿಯಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ

 ಉಪಚುನಾವಣೆ ಗೆಲುವು ನಮಗೆ ಹರ್ಷ  ತಂದಿದೆ ಅಂತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಪಚುನಾವಣೆ ಬಿಜೆಪಿ ಗೆಲುವಿನ ಬಗ್ಗೆ ಮಾತನಾಡಿದ ಅವರು ಇದು ಅಭಿವೃದ್ಧಿ ಮತ್ತು ಅಪಪ್ರಚಾರದ ನಡುವಿನ ಚುನಾವಣೆ ಆಗಿತ್ತು. ಅಸ್ಥಿರ ವ್ಯವಸ್ಥೆ ಹೋಗಿ ಸ್ಥಿರ ಸರಕಾರ ಬಂದಿದೆ. ಮೂರೂವರೆ ವ? ಪರಿಣಾಮಕಾರಿ ಆಡಳಿತ ಕೊಡುತ್ತೇವೆ. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಗೆಲುವು ಬಗ್ಗೆ ಮಾತನಾಡಿದ ಅವರು ಜನರ ತೀರ್ಮಾನ ಗೌರವದಿಂದ ಸ್ವೀಕರಿಸಿದ್ದೇವೆ. ಮುಂದೆ ಏನು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಬಿಜೆಪಿಗೆ ಬೆಂಬಲಿಸುವುದಾಗಿ ಶರತ್ ಬಚ್ಚೇಗೌಡ ಹೇಳಿದ್ದಾರೆ ಈ ಬಗ್ಗೆ ಸಿಎಂ, ರಾಜ್ಯಾಧ್ಯಕ್ಷರು ತೀರ್ಮಾನಿಸುತ್ತಾರೆ ಎಂದರು. ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ. ಕಣ್ಣೀರು ಹಾಕಿದರೆ ಕೇಕೆ ಹಾಕಿದರೆ ಗೆಲುವು ಸಿಗಲ್ಲ. ಯಡಿಯೂರಪ್ಪ ಈ ವಯಸ್ಸಿನಲ್ಲಿ ಓಡಾಟ ಮಾಡಿದ ಫಲ ಇದ.ಬಿಜೆಪಿ ಮತ್ತು ಬಿಎಸ್ ವೈ ಟೀಕಿಸುವವರು ಇನ್ನಾದರು ನಮ್ಮ ಶಕ್ತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

Related posts

Leave a Reply

Your email address will not be published. Required fields are marked *