Header Ads
Header Ads
Breaking News

ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳ-ಕರೆ ಮುಹೂರ್ತ

ಉಪ್ಪಿನಂಗಡಿಯ ವಿಜಯ – ವಿಕ್ರಮ ಜೋಡುಕರೆ ಕಂಬಳವು ಫೆಬ್ರವರಿ24 ಮತ್ತು 25ರಂದು ನಡೆಯಲಿದ್ದು, ಹಳೆಗೇಟು ದಡ್ಡುವಿನ ಶ್ರೀ ರಾಜನ್‌ದೈವ ಕಲ್ಕುಡಕಟ್ಟೆಯ ಬಳಿ ಇರುವ ನೇತ್ರಾವತಿ ನದಿ ಕಿನಾರೆಯ ಕಂಬಳ ಕರೆಯಲ್ಲಿ ಕಂಬಳಕ್ಕಾಗಿ ಕರೆ ಮುಹೂರ್ತ ನಡೆಯಿತು.

ಕರೆ ಮುಹೂರ್ತ ನೆರವೇರಿಸಿ ಮಾತನಾಡಿದ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ, ಕಂಬಳ ಪರ ಕಾನೂನು ಹೋರಾಟಗಾರ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಈ ಬಾರಿಯ ವಿಜಯ- ವಿಕ್ರಮ ಕಂಬಳವನ್ನು ಹಲವು ವೈಶಿಷ್ಟ್ಯಗಳೊಂದಿಗೆ ಅದ್ದೂರಿಯಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಕರೆ ಮುಹೂರ್ತದ ಬಳಿಕ ಕಟ್ಟಡ ಕಾರ್ಮಿಕರ ಸಂಘದವರು ಹಾಗೂ ಸಾರ್ವಜನಿಕರು ಕಂಬಳ ಕರೆಯಲ್ಲಿ ಶ್ರಮದಾನ ನಡೆಸಿದರು. ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ನಂದಾವರ, ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ ಬೆಳ್ಳಿಪ್ಪಾಡಿ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷ ವಿಠಲ ಶೆಟ್ಟಿ ಕುಲ್ಲೊಟ್ಟು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Related posts