Header Ads
Breaking News

ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರವೀಣ್ ರೈಗೆ ಸಿಎಂ ಪದಕ

ಪುತ್ತೂರು ತಾಲ್ಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣಾ ಕಾನ್ಸ್ ಟೇಬಲ್ ಪ್ರವೀಣ್ ರೈ ಪಾಲ್ತಾಡಿರವರಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಯನ್ನು ಗುರುತಿಸಿ ಸರಕಾರ ನೀಡುವ 2020ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣಾ ಕಾನ್ಸ್ ಟೇಬಲ್ ಪ್ರವೀಣ್ ರೈ ಪಾಲ್ತಾಡಿ ರವರು ಆಯ್ಕೆಯಾಗಿದ್ದು, ಅವರಿಗೆ ಬೆಂಗಳೂರಿನ ಕೋರಂಗಲದಲ್ಲಿರುವ ಕೆ.ಎಸ್.ಆರ್.ಪಿ ಮೂರನೇ ಬೆಟಾಲಿಯನ್‌ನಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಂದು ಮುಖ್ಯ ಮಂತ್ರಿ ಯಡಿಯೂರಪ್ಪರವರು ಪದಕ ಪ್ರದಾನ ಮಾಡಿದರು.    ಗ್ರಹ ಮಂತ್ರಿ ಬಸವರಾಜ್ ಬೊಮ್ಮಾಯಿ, ಗ್ರಹಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ 128 ಸಿಬಂದಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Related posts

Leave a Reply

Your email address will not be published. Required fields are marked *