Header Ads
Header Ads
Breaking News

ಉಪ್ಪಿನಂಗಡಿ: ಮಾರ್ಚ್2 ಮತ್ತು 3ರಂದು ವಿಜಯ-ವಿಕ್ರಮ ಜೋಡುಕರೆ ಕಂಬಳ

34ನೇ ವರ್ಷದ ವಿಜಯ ವಿಕ್ರಮ ಜೋಡುಕರೆ ಕಂಬಳವು ದಿನಾಂಕ ಮಾರ್ಚ್ 2ರಂದು ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆ ಕೂಟೇಲು ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಜಾಗದಲ್ಲಿ ನವೀನ ಮಾದರಿಯ ಕರೆಯನ್ನು ನಿರ್ಮಿಸಿ ಜೋಡುಕರೆಯಲ್ಲಿ ಸಂಪ್ರದಾಯಬಧ್ಧವಾಗಿ ಶಾಸ್ತ್ರೋಕ್ತವಾಗಿ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು.
ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಬೆಳಗ್ಗೆ 8.55 ರಿಂದ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಅತಿಥಿಗಳು, ಕಂಬಳಾಭಿಮಾನಿಗಳು, ಕಂಬಳದ ಕೋಣಗಳ ವೈಭವದ ಮೆರವಣಿಗೆಯೊಂದಿಗೆ ಆಗಮಿಸಿ ಕಂಬಳಕೂಟ ಉದ್ಘಾಟನೆಗೊಳ್ಳಲಿದೆ.

ಕಂಬಳದ ಸಭಾ ಕಾರ್ಯಕ್ರಮವು ಸಂಜೆ 6.00ಕ್ಕೆ ಸರಿಯಾಗಿ ಕಂಬಳದ ಭವ್ಯ ವೇದಿಕೆಯಲ್ಲಿ ನಡೆಯಲಿದ್ದು, ಉದ್ಘಾಟನೆಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ, ಅಧ್ಯಕ್ಷತೆಯನ್ನು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಮಾಜಿ ಸಚಿವ ರಮಾನಾಥ ರೈ, ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭವು ಮಾರ್ಚ್ 3 ರಂದು ಅತಿಥಿಗಳ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಎನ್.ಉಮೇಶ್ ಶೆಣೈ, ಕುಶಾಲಪ್ಪ ಗೌಡ ಪೂವಾಜೆ, ಕೇಶವ ಭಂಡಾರಿ ಕೈಪ ಬೆಳ್ಳಿಪ್ಪಾಡಿ, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *