Header Ads
Breaking News

ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ಭೀಕರ ಅಪಘಾತ

ನೆಲ್ಯಾಡಿ: ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಹಳ್ಳ ಸೇತುವೆಯ ಬಳಿ ಮುಖಾಮುಖಿ ಢಿಕ್ಕಿಯಾಗಿತ್ತು.

ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್, ಸ್ಯಾಮ್ಸನ್ ಹಾಗೂ ಸೈರಸ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *