Header Ads
Breaking News

ಉಳ್ಳಾಲದಲ್ಲಿ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ : ಕಿಡಿಗೇಡಿಗಳನ್ನು ಬಂಧಿಸುವಂತೆ ಸ್ಥಳೀಯರ ಒತ್ತಾಯ

ಉಳ್ಳಾಲದ ಬಸ್ ನಿಲ್ದಾಣದಲ್ಲಿರುವ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ನಡೆದಿದೆ. ಸಿಎಂ ಬಿಎಸ್ವೈ ಮತ್ತು ಅವರ ಪುತ್ರ ವಿಜಯೇಂದ್ರ ಭಾವಚಿತ್ರಕ್ಕೆ ಶಿಲುಬೆಯಾಕೃತಿ ಚಿತ್ರ ಬಿಡಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ಅವಹೇಳನಕಾರಿ ಬರಹ ಬರೆದ ವಿಕೃತಿ ಕಂಡುಬಂದಿದೆ.

ಉಳ್ಳಾಲದ ಕೊರಗಜ್ಜ ಸೇವಾ ಸಮಿತಿಯವರು ಪ್ರತೀ ತಿಂಗಳ ಸಂಕ್ರಾಂತಿಯಂದು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆ ಇಟ್ಟಿದ್ದಾರೆ. ಈ ಬಾರಿ ಸ್ವಲ್ಪ ತಡವಾಗಿ ಇಂದು ಸಂಜೆ ಕಾಣಿಕೆ ಡಬ್ಬಿ ತೆರೆದಿದ್ದು ಡಬ್ಬಿಯ ಒಳಗೆ ಕಾಂಡೋಮ್ ಗಳು ಮತ್ತು ಪ್ರಚೋದನಕಾರಿ ಬರಹಗಳಿದ್ದ ಪ್ಲೆಕ್ಸ್ ಒಂದು ಲಭಿಸಿದೆ. ಕೊರಗಜ್ಜ ಸೇವಾ ಸಮಿತಿಯವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ.

Related posts

Leave a Reply

Your email address will not be published. Required fields are marked *