Header Ads
Breaking News

ಉಳ್ಳಾಲದಲ್ಲಿ ಮತದಾನ ಹಬ್ಬ: ಸಮುದ್ರ ತೀರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಉಳ್ಳಾಲ: ಎ.18ರಂದು ತಪ್ಪದೇ ಮತದಾನ ಮಾಡಬನ್ನಿ ಅನ್ನುವ ಘೋಷ ವಾಕ್ಯದಡಿ ಜಿಲ್ಲಾಡಳಿತ ವತಿಯಿಂದ, ಉಳ್ಳಾಲ ನಗರಸಭೆ ನೇತೃತ್ವದಲ್ಲಿ ಉಳ್ಳಾಲದ ಸಮುದ್ರ ತೀರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಳೊಂದಿಗೆ ಮತಾದನ ಜಾಗೃತಿ ಕುರಿತ ಹಬ್ಬ ನಡೆಯಿತು.
ಕಿನ್ಯಾ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಲದ ಆಶ್ರಯದಲ್ಲಿ ಮತದಾನ ಜಾಗೃತಿಯ ಯಕ್ಷಗಾನ, ಸ್ಥಳೀಯ ಸ್ಪರ್ಶ ಕಲಾವಿದರಿಂದ ಮರಳು ಶಿಲ್ಪಕಲೆ, ಉಳ್ಳಾಲ ಕಡಲ ಕಿನಾರೆಯಲ್ಲಿ ಬಲೆಬೀಸಿ ಮೀನು ಹಿಡಿಯುವ ಸ್ಪರ್ಧೆ, ರೋಷನಿ ನಿಲಯ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತೆ ಜಾಗೃತಿಗಾಗಿ ಬೀದಿ ನಾಟಕ ಹಾಗೂ ಉಳ್ಳಾಲದಿಂದ ಮುಕ್ಕಚ್ಚೇರಿವರೆಗಿನ ಸಮುದ್ರ ತೀರದಲ್ಲಿ ಸಾರ್ವಜನಿಕರಿಂದ ಮಾನವ ಸರಪನಡೆಯಿತು.

ಸಹಾಯಕ ಆಯುಕ್ತ ರವಿಚಂದ್ರ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ನಗರಸಭೆ ಆಯುಕ್ತ ಶ್ರೀನಿವಾಸ ಮೂರ್ತಿ, ಮೊಗವೀರ ಮುಖಂಡರುಗಳಾದ ದಯಾನಂದ, ಮನೋಜ್ ಸಾಲ್ಯಾನ್, ವಾಸುದೇವ ರಾವ್ ಉಪಸ್ಥಿತರಿದ್ದರು.
ಉಳ್ಳಾಲ ಪೊಲೀಸರು, ಕರಾವಳಿ ಕಾವಲು ಪೊಲೀಸ್ ಹಾಗೂ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.

Related posts

Leave a Reply

Your email address will not be published. Required fields are marked *