Header Ads
Breaking News

ಉಳ್ಳಾಲದ ಮುಕ್ಕಚೇರಿಯಲ್ಲಿ ಎರಡು ತಂಡಗಳ ನಡುವಿನ ಹೊಡೆದಾಟ ಹಾಗೂ ಗುಂಡು ಹಾರಾಟ ಪ್ರಕರಣ ಹಲವರ ಬಂಧನ

ಉಳ್ಳಾಲದ ಮುಕ್ಕಚ್ಚೇರಿ ಸಮೀಪದ ಕಡಪರ ಎಂಬಲ್ಲಿ ರವಿವಾರ ತಡರಾತ್ರಿ ಎರಡು ತಂಡಗಳ ನಡುವಿನ ಹೊಡೆದಾಟ ಹಾಗೂ ಗುಂಡು ಹಾರಾಟ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಸುಹೈಲ್ ಕಂದಕ್ ಮತ್ತು ಕಡಪರ ನಿವಾಸಿ ಸಲ್ಮಾನ್ ಎಂಬವರ ತಂಡಗಳ ನಡುವೆ ಈ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಸುಹೈಲ್ ಕಂದಕ್ ಹಾಗೂ ಕಡಪರ ನಿವಾಸಿ ಇರ್ಶಾದ್(20) ಎಂಬವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಸುಹೈಲ್ ಕಂದಕ್ ಗುಂಡು ಹಾರಾಟ ನಡೆಸಿದ್ದು, ಇದರಿಂದ ಇರ್ಶಾದ್ ಕಾಲಿಗೆ ಗಾಯಗಳಾಗಿವೆ. ಇದೇ ವೇಳೆ ಸಲ್ಮಾನ್ ಮತ್ತು ತಂಡ ಸುಹೈಲ್ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದೆ. ಇದರಿಂದ ಅವರು ಕೂಡಾ ಗಾಯಗೊಂಡಿದ್ದಾರೆ. ಶೂಟೌಟ್ ನಡೆಸಿದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು  ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ, ದೂರು, ಪ್ರತಿದೂರುಗಳು ದಾಖಲಾಗಿವೆ. ಇರ್ಶಾದ್ ನೀಡಿರುವ ದೂರಿನನ್ವಯ ಬಶೀರ್, ಸುಹೈಲ್ ಕಂದಕ್ ಮತ್ತು ತಂಡದ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸುಹೈಲ್ ಕಂದಕ್ ನೀಡಿರುವ ದೂರಿನ್ವಯ ಸಲ್ಮಾನ್ ಮತ್ತು 10 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *