Header Ads
Breaking News

ಉಳ್ಳಾಲ:ರಾಜ್ಯ ಹೆದ್ದಾರಿ ಬದಿಯ ಅನಧಿಕೃತ ಅಂಗಡಿಗಳ ತೆರವು!

ತೊಕ್ಕೊಟ್ಟು-ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯ ನಾಟೆಕಲ್ ಸರ್ಕಲ್‌ನಿಂದ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆವರೆಗಿನ ರಸ್ತೆಯ ಎರಡು ಬದಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಬೆಳ್ಮ ಪಂಚಾಯಿತಿ ಹಾಗೂ ಕೋಟೆಕಾರು ಪಟ್ಟಣ ಪಂಚಾಯಿತಿ ಜತೆಯಾಗಿ ತೆರವು ಕಾರ್‍ಯಾಚರಣೆ ನಡೆಸಿತು.ರಸ್ತೆ ಬದಿ ಸರಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಗೂಡಂಗಡಿಗಳ ತೆರವಿಗೆ 15 ದಿನಗಳ ಹಿಂದೆಯೇ ಎಚ್ಚರಿಸಲಾಗಿದೆ. ಬೆಳ್ಮ ಗ್ರಾಮ ಪಂಚಾಯಿತಿ ವತಿಯಿಂದ ಬ್ಯಾನರ್ ಅಳವಡಿಸಿ ಎಚ್ಚರಿಕೆಯನ್ನು ನೀಡಲಾಗಿತ್ತು. ಇದನ್ನು ಗಣನೆಗೆ ತೆಗೆದುಕೊಳ್ಳದೇ ಹಿನ್ನೆಲೆಯಲ್ಲಿ ಕಾರ್‍ಯಾಚರಣೆ ನಡೆಸಿ ಹಲವು ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸಲಾಗಿದೆ.


ಬೆಳ್ಮ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿನ ವಿಸ್ತರಿಸಲಾದ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಕಾನೂನು ಎಲ್ಲರಿಗೂ ಒಂದೇ ಎಂದು ತೋರಿಸಲಾಗಿದೆ. ರಸ್ತೆ ಅಭಿವೃದ್ಧಿ ಜೊತೆಗೆ ಚರಂಡಿ ಅನುಷ್ಠಾನ, ಅಪಘಾತಗಳ ತಡೆಗಟ್ಟುವಿಕೆ, ಪಾದಚಾರಿಗಳಿಗೆ ನಡೆದಾಡಲು ಸ್ಥಳಾವಕಾಶ ಕಲ್ಪಿಸುವ ಉದ್ದೇಶದಿಂದ ಸರಕಾರಿ ಜಾಗದಲ್ಲಿರುವ ಪ್ರತಿಯೊಂದು ಅಂಗಡಿಗಳನ್ನು ತೆರವು ನಡೆಸಲಾಗಿದೆ. ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್ಸುಗಳು ರಸ್ತೆಗಿಳಿಯುವ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಅನ್ನುವ ಅಧಿಕಾರಿಗಳ ಅಭಿಪ್ರಾಯ.ತೆರವು ಕಾರ್‍ಯಾಚರಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ದಾಸ್ ಪ್ರಕಾಶ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನವೀನ್ ಹೆಗ್ಡೆ , ಕೋಟೆಕಾರು ಪಟ್ಟಣ ಪಂಚಾಯಿತಿ ಪೌರಾಯುಕ್ತೆ ಪೂರ್ಣಕಲಾ ಭಾಗವಹಿಸಿದ್ದರು. 

Related posts

Leave a Reply

Your email address will not be published. Required fields are marked *