Header Ads
Breaking News

ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ : ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮೇಲ್ತೆನೆ ಯ ಸಹಕಾರದಲ್ಲಿ ಮಾ.27ರಂದು ಉಳ್ಳಾಲ ಅಳೇಕಲದ ಮದನಿ ಪಿಯು ಕಾಲೇಜಿನಲ್ಲಿ ನಡೆಯಲಿರುವ ಉಳ್ಳಾಲ ತಾಲೂಕು ಪ್ರಥಮ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದ ಆಮಂತ್ರಣ ಪತ್ರವನ್ನು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ.ಕೆ.ಎಂ.ಮುನೀರ್ ಬಾವಾ ಸೋಮವಾರ ಅಕಾಡಮಿಯ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಉಳ್ಳಾಲ ತಾಲೂಕು ಘೋಷಣೆಯಾದ ಬಳಿಕ ನಡೆಯುವ ಪ್ರಪ್ರಥಮ ಬ್ಯಾರಿ ಸಾಹಿತ್ಯ ಸಮ್ಮೇಳನ ಇದಾಗಿದೆ ಎಂದರು.ಈ ಸಂದರ್ಭ ಅಕಾಡಮಿಯ ರಿಜಿಸ್ಟಾರ್ ಪೂರ್ಣಿಮಾ, ಮೇಲ್ತೆನೆಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಪ್ರಧಾನ ಕಾರ್ಯದರ್ಶಿ ಅಶೀರುದ್ದೀನ್ ಸಾರ್ತಬೈಲ್, ಕೋಶಾಧಿಕಾರಿ ಬಶೀರ್ ಕಲ್ಕಟ್ಟ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *