Header Ads
Header Ads
Breaking News

ಉಳ್ಳಾಲ ನಗರಸಭೆ ವಿರುದ್ಧ ಪ್ರತಿಭಟನಾ ಜಾಥಾ

ಕಳೆದ ಒಂದು ವರ್ಷದಿಂದ ಉಳ್ಳಾಲ ನಗರಸಭೆಯಲ್ಲಿ ಚುನಾಯಿತ ಆಡಳಿತ ಬರದೆ ಕೆಲವೇ ಸ್ಥಾಪಿತ ಹಿತಾಸಕ್ತಿಗಳ ಅಣತಿಯಂತೆ ಉಳ್ಳಾಲದ ಆಡಳಿತ ನಡೆಯುತ್ತಿದ್ದು ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ. ಉಳ್ಳಾಲ ನಗರಸಭಾ ಅನ್ಯಾಯದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯನ್ನು ಸೆ. 11ರ ಬುಧವಾರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಂಡಿದ್ದು ಪ್ರತಿಭಟನೆಯಲ್ಲಿ ಪಕ್ಷ ಬೇಧ ಮರೆತು ಎಲ್ಲಾ ಸಂಘಟನೆಗಳು ಸಂಘ ಸಂಸ್ಥೆಗಳು ಒಟ್ಟು ಸೇರಿ ನಾಗರಿಕ ಹಿತರಕ್ಷಣಾ ಸಮಿತಿ ರಚಿಸಿ ಹೋರಾಟ ನಡೆಸಲಿದ್ದಾರೆ ಎಂದು ಸಮಿತಿ ಕಾರ್ಯದರ್ಶಿ ಝಾಕಿರ್ ಉಳ್ಳಾಲ್ ತಿಳಿಸಿದರು.ತೊಕ್ಕೊಟ್ಟಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳ್ಳಾಲ ಪಂಚಾಯತ್, ಪುರಸಭೆ, ನಗರಪಂಚಾಯತ್ ಆಗಿ ಇದೀಗ ನಗರಸಭೆಯಾಗಿ ಮೇಲ್ದರ್ಜೆಗೇರಿದರೂ ಪರಿವರ್ತನೆ ಹೆಸರಿಗೆ ಮಾತ್ರ ಸೀಮಿತವಾಗಿದ್ದು, ನಗರಸಭೆಯಲ್ಲಿ ಸಿಗುವ ಮೂಲಭೂತ ಸೌಕರ್ಯಗಳಾದ ದಾರಿದೀಪ, ಒಳಚರಂಡಿ, ಶುದ್ಧ ಕುಡಿಯುವ ನೀರು, ರಸ್ತೆ, ತ್ಯಾಜ್ಯ ವಿಲೇವಾರಿ ಸೇರಿದಂತೆ ಉಳ್ಳಾಲಕ್ಕೆ ಬಿಡುಗಡೆಯಾಗುವ ಯಾವುದೇ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತಿಲ್ಲ ಇದಕ್ಕೆ ಮುಖ್ಯವಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕರು ವಿಧಾನಸಭೆಯಲ್ಲಿ ಸರಿಯಾಗಿ ಧ್ವÀನಿಯೆತ್ತದೆ ಇರುವುದು ಮತ್ತು ಇಲ್ಲಿನ ಅಧಿಕಾರಿಗಳ ಕಾರ್ಯ ವೈಖರಿಯಿಂದ ಆಗಿದ್ದು ಯಾವುದೇ ಸರಕಾರಿ ಕೆಲಸ ಆಗಬೇಕಾದರೂ ವಿಳಂಬ ಧೋರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭ ಉಳ್ಳಾಲ ನಾಗರಿಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ದಿನಕರ ಉಳ್ಳಾಲ್, ಉಪಾಧ್ಯಕ್ಷರಾದ ಭಗವಾನ್ ದಾಸ್, ಕೋಶಾಧಿಕಾರಿ ಮುಸ್ತಾಕ್ ಅಹ್ಮದ್ ಪಟ್ಲ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *