Header Ads
Header Ads
Breaking News

ಉಳ್ಳಾಲ ಬೀಚ್‌ನಲ್ಲಿ ಜಿಲ್ಲಾಡಳಿತದಿಂದ ಅಬ್ಬಕ್ಕ ಉತ್ಸವ

ಉಳ್ಳಾಲ: ವರ್ಷಗಳಿಂದ ಸಮಸ್ಯೆಯ ಕೂಪದಲ್ಲಿ ನಡೆಯುತ್ತಿದ್ದ ವೀರರಾಣಿ ಅಬ್ಬಕ್ಕ ಉತ್ಸವ ಈ ಬಾರಿ ಕಡಲತೀರದಲ್ಲಿ ಅದ್ಧೂರಿಯಾಗಿ ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯಲಿದೆ. ಜನ ತಮ್ಮೆಲ್ಲರ ಉತ್ಸವ ಎಂದು ಮನಗಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.
ಅವರು ದ.ಕ ಜಿಲ್ಲಾಡಳಿತ ಮತ್ತು ಉಳ್ಳಾಲ ನಗರಸಭೆ ಇದರ ವತಿಯಿಂದ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ಉಳ್ಳಾಲ ಬೀಚ್ ನಲಿ ನಡೆದ ಬೀಚ್ ಸ್ವಚ್ಛತಾ ಅಭಿಯಾನ ಮತ್ತು ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಕ್ಕ ಉತ್ಸವದ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು. ಉಳ್ಳಾಲ ನಗರಸಭೆ ಪೌರಾಯುಕ್ತೆ ವಾಣಿ.ವಿ.ಆಳ್ವ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸಿಇಓ ಸೆಲ್ವ ಮಣಿ.ಆರ್, ಪಣಂಬೂರು ಬೀಚ್ ಅಭಿವೃದ್ಧಿಯ ಯತೀಶ್ ಬೈಕಂಪಾಡಿ, ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್, ಮಾರುತಿ ಯುವಕ ಮಂಡಲದ ಮನೋಜ್ ಸಾಲಿಯಾನ್, ಸಿಸಿಎನ್ ರಾಜೇಶ್ ಉಳ್ಳಾಲ್, ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *