Header Ads
Breaking News

ಗುರುವಂದನೆ ಮತ್ತು ಸನ್ಮಾನ ಕಾರ್ಯಕ್ರಮ

ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ನಿವೃತ್ತ ಮತ್ತು ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಗುರುವಂದನೆ ಮತ್ತು ಸನ್ಮಾನ ಕಾರ್ಯಕ್ರಮ ತೊಕ್ಕೊಟ್ಟಿನ ಯುನಿಟಿ ಹಾಲ್ ನಲ್ಲಿ ನಡೆಯಿತು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಯ್ಯೂಬ್ ಕಯ್ಯೂರು ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನೂಷ್ ಎ. ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಯ್ಯೂಬ್ ಕಯ್ಯೂರು ಮಾತನಾಡಿ
ದೇಶವನ್ನು ಕಟ್ಟುವ ಶಿಕ್ಷಕ ವೃತ್ತಿ ಜಗತ್ತಿನ ಅತ್ಯಂತ ಶ್ರೇಷ್ಠ ವೃತ್ತಿ, ಯಾವುದೇ ಯಶಸ್ವೀ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ. ಓರ್ವ ಶಿಕ್ಷಕ ದಾರಿ ತಪ್ಪಿದರೆ ಇಡೀ ಸಮಾಜ ದಾರಿ ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು.

ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನೂಷ್ ಎ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸುವುದು ಅತ್ಯಂತ ಖುಷಿ ಕೊಟ್ಟಿದೆ. ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಇರುತ್ತದೆ. ವಿದ್ಯೆಗೆ ಯಾವುದೇ ಜಾತಿ, ಮತ, ಭೇದವಿಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಗೌರವಿಸುವ ಮನಸ್ಸು ಸಮಾಜದ ಬಗ್ಗೆ ತುಡಿತ ಇರುವ ಜನಪ್ರತಿನಿಧಿಗೆ ಮಾತ್ರ ಸಾಧ್ಯ ಎಂದು ಹೇಳಿದರು.
ಶಾಸಕ ಯು.ಟಿ.ಖಾದರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನಿಗೆ ’ನಮ್ಮೂರ ಹೆಮ್ಮೆ ಪುರಸ್ಕಾರ’ ನೀಡಿ ಸನ್ಮಾನಿಸಲಾಯಿತು. ಶಿಕ್ಷಕ ಸತೀಶ್ ಭಟ್ ದಿಕ್ಸೂಚಿ ಭಾಷಣ ಮಾಡಿದರು.
ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಸದಸ್ಯೆ ಸುರೇಖ ಚಂದ್ರಹಾಸ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕುರ್ನಾಡು ಪ್ರಥಮ ದರ್ಜೆ ಪದವಿಪೂರ್ವ ಕಾಲೇಜು ಉಸ್ತುವಾರಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಜಯವಂತಿ ಸೋನ್ಸ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ ಕೆ.ಎಸ್., ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ತ್ಯಾಗಂ ಹರೇಕಳ, ಮಮತಾ ಗಟ್ಟಿ. ಕೆಎಂಕೆ ಮಂಜನಾಡಿ. ರಫೀಕ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *