Header Ads
Header Ads
Breaking News

ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಆಂಗ್ಲಭಾಷಾ ವಿಭಾಗ, ಹಳೆ ವಿದ್ಯಾರ್ಥಿ ಸಂಘ, ಲಯನ್ಸ್ ಕ್ಲಬ್‌ನ ಆಶ್ರಯದಲ್ಲಿ ಋತು ಚಕ್ರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ

ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಆಂಗ್ಲಭಾಷಾ ವಿಭಾಗ, ಹಳೆ ವಿದ್ಯಾರ್ಥಿ ಸಂಘ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಮಂಗಳೂರು ಇದರ ಆಶ್ರಯದಲ್ಲಿ ” ಋತುಚಕ್ರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ , ಬೆಸೆಂಟ್ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮ ಶಾಲಾ ಹೆಣ್ಮಕ್ಕಳಿಗೋಸ್ಕರ ಖುತುಚಕ್ರದ ಬಗೆ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಸಂಪನ್ಮೂಲ ವ್ಯಕ್ತಿಯಾಗಿದ್ದ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಸಹಾಯಕ ಪ್ರಾಧ್ಯಾಪಕರಾದ ಡಾ.ಅಂಕಿತ ಮೆನೋನಾ.ಜೆ.ಅವರು ಕಾರ್ಯಾಗಾರವನ್ನುಉದ್ಘಾಟಿಸಿದರು. ಇದೇ ವೇಳೆ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಇನ್ನೂ ಬೆಸೆಂಟ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ದೇವಾನಂದ್ ಪೈ ಮಾತನಾಡಿ, ಇಂತಹ ಕಾರ್ಯಾಗಾರಗಳು ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸ್ವರೂಪ ಶೆಟ್ಟಿ, ಕಾರ್ಯದರ್ಶಿ ಪ್ರೋ.ಮೀರಾ ಎಡ್ನ ಕೊಹಿಲ್ಲೋ, ಆಂಗ್ಲಭಾಷಾ ವಿಭಾಗದ ಮುಖ್ಯಸ್ಥರಾದ ಪ್ರೋ.ಪ್ರೀತಾ ಭಂಡಾರ ಮತ್ತಿತರರು ಉಪಸ್ಥಿತರಿದ್ದರು. ಅತಿಥಿಗಳನ್ನ ಕಾಲೇಜಿನ ಪ್ರಾಂಶುಪಾಲರಾದ ಡಾ.ಸತೀಶ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಆಂಗ್ಲಭಾಷಾ ವಿಭಾಗದ ಉಪನ್ಯಾಸಕಿ ರೂಪಾ ಸಾಲ್ಯಾನ್ ನಿರೂಪಿಸಿದರು.

Related posts

Leave a Reply

Your email address will not be published. Required fields are marked *