
ಮೂಡಬಿದ್ರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನವೆಂಬರ್ 24 ರಂದು 3 ನೇ ವರ್ಷದ ಕನ್ನಡ ಹಬ್ಬ ಹಾಗೂ ನವೆಂಬರ್ 25 ರಂದು ‘ವೀರ ಸಾಗರ’ ನೂತನ ವಿದ್ಯಾರ್ಥಿನಿಲಯದ ಉದ್ಘಾಟನೆ ಮತ್ತು 6 ನೇ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಹೇಳಿದ್ರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ್ರು.
ಕನ್ನಡಹಬ್ಬವನ್ನು ಸಾಹಿತಿ ವೈದೇಹಿ ಉದ್ಘಾಟಿಸಲಿದ್ದು, ಈ ವೇಳೆ ಚಿತ್ರನಟ ರವಿ ಮುಖ್ಯ ಅತಿಥಿಯಾಗಿರುತ್ತಾರೆ. ಸಭಾ ಕಾರ್ಯಕ್ರಮದ ಬಳಿಕ ರಾಜ್ಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಕವಿಗೋಷ್ಠಿ ಮತ್ತು ಕಥಾಗೋಷ್ಠಿ ನಡೆಯಲಿದೆ. ನವೆಂಬರ್ 25 ರಂದು ‘ವೀರ ಸಾಗರ’ ನೂತನ ವಿದ್ಯಾರ್ಥಿನಿಲಯವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಅಭಯಚಂದ್ರ ಜೈನ್, ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲ ಮುಖ್ಯ ಅತಿಥಿಗಳಾಗಿದ್ದು, ಉಜಿರೆ ಎಸ್ಡಿಎಂ ಸಂಸ್ಥೆಗಳ ಉಪಾಧ್ಯಲ್ಷ ಡಿ.ಸುರೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆವಹಿಸಲಿದ್ದಾರೆ.
ನ.25 ರಂದು 6 ನೇ ವಾರ್ಷಿಕೋತ್ಸವ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿರುವರು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಚ್ ಮಾದವ ಭಟ್, ನಿಟ್ಟೆ ವಿಶ್ವದ್ಯಾಲಯದ ಉಪಕುಲಪತಿ ಡಾ.ಬಿ ಸತೀಶ್ ಕುಮಾರ್ ಭಂಡಾರಿ ಮುಖ್ಯ ಅತಿಥಿಗಳಾಗಿರುವರು. ಪರಂಪರೆಯನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಎರಡು ದಿನಗಳು ಆಯೋಜಿಸಲಾಗಿದೆ ಎಂದು ಯುವರಾಜ್ ಜೈನ್ ತಿಳಿಸಿದ್ದಾರೆ.
ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಪಿಆರ್ಒ ದೇವಿ ಚರಣ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.