Breaking News

ಎಚ್. ವಿಶ್ವನಾಥ್ ಬಿಜೆಪಿ ಸೇರ್ಪಡೆ ಸತ್ಯಕ್ಕೆ ದೂರ, ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ‌ಎಸ್‌ವೈ

ಕಾಂಗ್ರೆಸ್ ಮುಖಂಡ ಎಚ್. ವಿಶ್ವನಾಥ್ ಬಿಜೆಪಿ ಸೇರ್ಪಡೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಈ ಬಗ್ಗೆ ಹರಡಿರುವ ವಿಚಾರ ಸತ್ಯಕ್ಕೆ ದೂರವಾದುದು ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು.
ಅವರು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಚಾರ ಸ್ಪಷ್ಟಪಡಿಸಿದರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಮೇ ೧೮ರಿಂದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಆರಂಭಿಸುತ್ತೇವೆ, ನಾವೆಲ್ಲ ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದು ಬಿ‌ಎಸ್‌ವೈ ಹೇಳಿದರು.
ಮುಂದುವರಿದು, ಕರ್ನಾಟಕ ದೇಶದಲ್ಲಿ ಭ್ರಷ್ಟ ಸರಕಾರದಲ್ಲಿ ಮೊದಲನೇ ಸ್ಥಾನದಲ್ಲಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರ ಅನುದಾನ ಕೊಟ್ಟರೂ ಹೆಚ್ಚು ಸಾಲ ಮಾಡಿರುವ ರಾಜ್ಯಗಳಲ್ಲಿ ಒಂದಾಗಿದೆ ಎಂದರು.

Related posts

Leave a Reply