Header Ads
Header Ads
Header Ads
Breaking News

ಎಡಿಬಿ ಜಲಸಿರಿ ಯೋಜನೆಯಡಿ ಕುಡಿಯುವ ನೀರು ಪೂರೈಕೆ ಬಗ್ಗೆ ಚರ್ಚೆ ಚರ್ಚೆಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆ ಭಾಗಿ

ಎಡಿಬಿ ಜಲಸಿರಿ ಯೋಜನೆಯಡಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವತಿಯಿಂದ ಕುಂದಾಪುರ ಪುರಸಭೆಗೆ ಮುಂದಿನ 2046 ರವರೆಗೆ ನಿರಂತರ 24 ಗಂಟೆಗಳ ಕಾಲ ನೀರು ಪೂರೈಕೆಗೆ ಏಶ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸಹಯೋಗದೊಂದಿಗೆ 16.44 ಕೋಟಿ.ರೂಪಾಯಿ ವೆಚ್ಚದಲ್ಲಿ ವಾರಾಹಿ ನೀರನ್ನು ಜಪ್ತಿಯಿಂದ ತರಲು ಯೋಜನೆ ಸಿದ್ಧವಾಗಿದೆ ಎಂದು ಯೋಜನೆಯ ಮುಖ್ಯಸ್ಥ ಪ್ರಭಾಕರ ಶರ್ಮಾ ಹೇಳಿದರು.

ಅವರು ಬುಧವಾರ ಕುಂದಾಪುರ ಪುರಸಭೆಯ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಎಡಿಬಿ ಜಲಸಿರಿ ಯೋಜನೆಯಡಿ ಕುಡಿಯುವ ನೀರು ಪೂರೈಕೆ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.

ಈ ಯೋಜನೆಯ ಕಾಮಗಾರಿಗೆ 2017 ರ ಡಿಸೆಂಬರ್ 19 ರಂದು ಚಾಲನೆ ನೀಡಲಾಗಿದ್ದು, ಮುಂದಿನ ೨೫ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಪುರಸಭಾಧ್ಯಕ್ಷೆ ವಸಂತಿ ಮೋಹನ ಸಾರಂಗ ಉಪಾಧ್ಯಕ್ಷ ರಾಜೇಶ್ ಕಾವೇರಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದರು.

Related posts

Leave a Reply