Header Ads
Header Ads
Breaking News

ಎನ್‌ಐಟಿಕೆ ಟೋಲ್‌ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ಸುಂಕ ಸಂಗ್ರಹ : ವಿವಿಧ ಪಕ್ಷಗಳ ಮತ್ತು ನಾಗರಿಕ ಸಂಘಟನೆಗಳಿಂದ ಪ್ರತಿಭಟನೆ

ಸುರತ್ಕಲ್: ಎನ್‌ಐಟಿಕೆ ಟೋಲ್ ಗೇಟ್‌ನಲ್ಲಿ ಸ್ಥಳೀಯ ವಾಹನಗಳಿಗೆ ಸುಂಕ ವಿಧಿಸಬಾರದೆಂದು ಅಗ್ರಹಿಸಿ ವಿವಿಧ ಪಕ್ಷಗಳ ಮತ್ತು ನಾಗರಿಕ ಸಂಘಟನೆಗಳ ಮುಖಂಡರು ನೀಡಿದ ಮನವಿಯನ್ನು ಪುರಸ್ಕರಿಸಿರುವ ಜಿಲ್ಲಾಧಿಕಾರಿಗಳು, ಸುಂಕ ವಸೂಲಿ ಕ್ರಮಕ್ಕೆ ಮೂರು ದಿನಗಳ ಕಾಲ ತಾತ್ಕಾಲಿಕ ತಡೆ ನೀಡಿದ್ದಾರೆ.

ಇಂದಿನಿಂದ ಸ್ಥಳೀಯ ವಾಹನಗಳಿಂದಲೂ ಒಂದು ಬಾರಿಗೆ 25 ರೂ. ನಂತೆ ವಸೂಲು ಮಾಡುವ ಕ್ರಮವನ್ನು ಗುತ್ತಿಗೆ ವಹಿಸಿಕೊಂಡ ಕಂಪೆನಿ ಕೈಬಿಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಎನ್ ಐಟಿಕೆ ಬಳಿಯ ಟೋಲ್ ಗೇಟ್ ನಲ್ಲಿ ಸ್ಥಳಿಯ ವಾಹನಗಳಿಗೂ ಸುಂಕ ಸಂಗ್ರಹಿಸಿಸುವ ನಿರ್ಧಾರವನ್ನು ವಿರೋಧಿಸಿ ಟೋಲ್ ಗೇಟ್ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ನಂತರವೂ ಮುಂದುವರಿದಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗಮಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಗೆ ದ.ಕ ಬಿಜೆಪಿ ಬೆಂಬಲ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ವಿಜಯಕುಮಾರ್ ಶೆಟ್ಟಿ, ಮುನೀರ್ ಕಾಟಿಪಳ್ಳ, ರಮೇಶ್ ಟಿ ಎನ್, ಮಿಥುನ್ ರೈ ಶಾಲೆಟ್ ಪಿಂಟೋ, ಈಶ್ವರ್ ಕಟೀಲ್, ತಿಲಕ್ ರಾಜ್ ಕೃಷ್ಣಾಪುರ, ಅಶೋಕ್ ಕೃಷ್ಣಾಪುರ, ಗಣೇಶ್ ಹೊಸಬೆಟ್ಟು, ರಜನಿ ದುಗ್ಗಣ್ಣ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

Related posts

Leave a Reply

Your email address will not be published. Required fields are marked *