Header Ads
Breaking News

ಎನ್ ಆರ್ ಸಿ ಮತ್ತು ಸಿಎಎ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ : ಬಂಟ್ವಾಳ ತಾಲೂಕು ವತಿಯಿಂದ ಆಯೋಜನೆ

ಬಂಟ್ವಾಳ: ಎನ್‍ಆರ್‍ಸಿ, ಎನ್‍ಪಿಆರ್, ಸಿಎಎ ವಿರೋಧಿ ಹೋರಾಟ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ತಾಲೂಕು ಮುಸ್ಲಿಂ ಒಕ್ಕೂಟ ಹಾಗೂ ಸಮಾನ ಮನಸ್ಕ ಸಂಘಟನೆಗಳು ಸೇರಿ ಕೇಂದ್ರ ಸರಕಾರವು ಅನುಷ್ಠಾನ ಗೊಳಿಸಿದ ಕಾಯ್ದೆಯ ಸೋಮವಾರ ಬಿ.ಸಿ.ರೋಡು-ಗೂಡಿನಬಳಿ ರಸ್ತೆಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.

ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಮಧ್ಯಾಹ್ನ ಸುಮಾರು 2.30ರ ವೇಳೆಗೆ ಆರಂಭಗೊಂಡ ಪ್ರತಿಭಟನೆಯು ಸಂಜೆ 6ರ ಬಳಿಕವೂ ಮುಂದುವರಿದಿತ್ತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಪ್ರಗತಿಪರ ಚಿಂತಕ, ಪತ್ರಕರ್ತ ಶಶಿಧರ್ ಭಟ್ ಮಾತನಾಡಿ, ಹಿಂದೂ ರಾಷ್ಟ್ರ ಸ್ಥಾಪನೆಯ ದೃಷ್ಟಿಯಿಂದ ಕೇಂದ್ರ ಸರಕಾರವು ಮುಸ್ಲಿಮರು ಸೇರಿದಂತೆ ಜಾತಿ ವ್ಯವಸ್ಥೆಯಲ್ಲಿ ಕೆಳಗಿರುವವರನ್ನು ನಾಶ ಮಾಡುವ ಉದ್ದೇಶದಿಂದ ಇಂತಹ ಕಾನೂನನ್ನು ಜಾರಿ ತರುತ್ತಿದ್ದು, ದೇಶದ ಬಹುತ್ವದ ನಾಶಕ್ಕೆ ಹೆಜ್ಜೆಯನ್ನಿಟ್ಟಿದೆ. ಬಿಜೆಪಿಯು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದೆ ಎಂದ್ರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಕೇಂದ್ರ ಸರಕಾರ, ಪ್ರಧಾನಿ ಅವರನ್ನು ಟೀಕಿಸಿದರೆ, ದೇಶದ ಆರ್ಥಿಕ ವ್ಯವಸ್ಥೆಯ ಕುರಿತು ಮಾತನಾಡಿದರೆ ಅಂತವರಿಗೆ ದೇಶದ್ರೋಹ ಪಟ್ಟ ನೀಡಲಾಗುತ್ತಿದೆ. ನಾವು ಎಂದಿಗೂ ತಾಳ್ಮೆ ಕಳೆದುಕೊಳ್ಳದೆ ಹೋರಾಟ ನಡೆಸಿದರೆ ಖಂಡಿತವಾಗಿಯೂ ಜಯ ನಮ್ಮದಾಗುತ್ತದೆ ಎಂದರು. ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಅಸಯ್ಯದ್ ಯಹ್ಯಾ ತಂಙಳ್, ಅಶ್ರಫ್ ಫೈಝಿ ಕೊಡಗು, ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ಮುಹಮ್ಮದ್ ಶಾಫಿ, ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಪ್ರತಿಭಟನೆ ಹಿನ್ನಲೆಯಲ್ಲಿ ಪ್ರತಿಭಟನಾ ಸ್ಥಳ ಸೇರಿದಂತೆ ಬಿ.ಸಿರೋಡು ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಮಾರ್ಗದರ್ಶನದಲ್ಲಿ ಎಎಸ್ಪಿ ಸೈದುಲ್ ಅಡಾವತ್, ಬಂಟ್ವಾಳ ಪೊಲೀಸ್ ವೃತ್ತನಿರೀಕ್ಷಕ ಟಿ.ಡಿ.ನಾಗಾರಾಜ್ ಸೇರಿದಂತೆ ಪೊಲೀಸ್ ತಂಡ ಬಂದೋಬಸ್ತ್ ಕೈಗೊಂಡು ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರವಹಿಸಿತ್ತು.

Related posts

Leave a Reply

Your email address will not be published. Required fields are marked *