Header Ads
Breaking News

ಎಪ್ರಿಲ್ 25ರಂದು ವಿಶ್ವ ಮಲೇರಿಯಾ ದಿನಾಚರಣೆ: ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನಾಚರಣೆಯನ್ನು ಎಪ್ರಿಲ್ 25ರಂದು ಆಚರಿಸಲಿದ್ದು, ಈಗಾಗಲೇ ಜನತೆಗೆ ಮಲೇರಿಯಾ ನಿಯಂತ್ರಣದ ಬಗಗೆ ಜಾಗೃತಿ ಮೂಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ತಿಳಿಸಿದರು.

ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರೋಗ್ಯಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲು ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಇನ್ನು ಎಪ್ರಿಲ್ ೨೫ರಂದು ಮಂಗಳೂರಿನ ನಗರದಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸೊಳ್ಳೆ ಬೆಳವಣಿಗೆ ನಿಯಂತ್ರಣ ಅಭಿಯಾನ ಮತ್ತು ಮಾಹಿತಿ ಶಿಕ್ಷಣ ನೀಡುವಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದ ಅವರು, ಸೊಳ್ಳೆ ಉತ್ಪತ್ತಿಯಾಗದ ಹಾಗೆ ಏನೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.

ಆನಂತರ ಡಾ. ಅರುಣ್ ಕುಮಾರ್ ಅವರು ಈ ವರ್ಷದ ವಿಶ್ವ ಮಲೇರಿಯಾ ದಿನಾಚರಣೆ ಘೋಷ ವಾಕ್ಯ ಮಲೇರಿಯಾ ನಿರ್ಮೂಲನೆ ನನ್ನಿಂದ ಪ್ರಾರಂಭ ಬಗ್ಗೆ ನಗರ ವ್ಯಾಪ್ತಿಯಲ್ಲಿ ವಾಹನ ಮೂಲಕ ಧ್ವನಿ ಮುದ್ರಿತ ಪ್ರಚಾರ ಹಾಗೂ ಭಿತ್ತಿಪತ್ರಗಳ ಮೂಲಕ ಪ್ರಚಾರ ಕಾರ್ಯಕ್ರಮ ನಡೆಸಲಾಗುವುದು. ಅಲ್ಲದೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಇಲಾಖಾ ವತಿಯಿಂದ ಪ್ರಸ್ತುತ ಮಲೇರಿಯಾ ನಿಯಂತ್ರಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಡಾ. ಮಂಜುಳಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *