Header Ads
Header Ads
Header Ads
Breaking News

ಎರಡು ದಿನಗಳ ಕಾಲ ನಡೆದ ವಲಯ ಮಟ್ಟದ ಕ್ರೀಡಾಕೂಟ ಮೂಡಬಿದ್ರೆಯ ಸ್ವರಾಜ್ಯ ಮೈದಾನದಲ್ಲಿ ಕ್ರೀಡಾಕೂಟ

ಮೂಡಬಿದ್ರೆಯ ಸ್ವರಾಜ್ಯ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಆಳ್ವಾಸ್ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಪ್ರೌಢಶಾಲಾ ವಿಭಾಗ ಮತ್ತು ಪ್ರಾಥಮಿಕ ವಿಭಾಗದಲ್ಲಿ ಶಿರ್ತಾಡಿಯ ಹೋಲಿ ಏಂಜಲ್ಸ್ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಸಾಕ್ಷಿ ಬಿ.ಕೆ ಮತ್ತು ಚೈತನ್ಯ, ಬಾಲಕರ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮದ ಗಣೇಶ್ ಹೆಚ್.ಡಬ್ಲ್ಯೂ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಅಭಿಷೇಕ್ ಅಣ್ಣಪ್ಪನವರ್ ಹಾಗೂ ಪ್ರೌಢಶಾಲಾ 14 ವರ್ಷದೊಳಗಿನ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಆರ್ಯ ರೈ, ಬಾಲಕರ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಮಹಮ್ಮದ್ ಮುನಾಫ್ ಹಾಗೂ ಪ್ರೌಢಶಾಲಾ 17 ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ರಂಜಿತಾ ಜಿ., ಬಾಲಕರ ವಿಭಾಗದಲ್ಲಿ ನಾಗೇಂದ್ರ ಅಣ್ಣಪ್ಪ ನಾಕ್, ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.

ರೋಟರಿ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ನಾರಾಯಣ ಪಿ.ಎಂ, ಅವರು ಬುಧವಾರ ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಪ್ರಶಸ್ತಿಯನ್ನು ವಿಜೇತರಿಗೆ ವಿತರಿಸಿದರು.

Related posts

Leave a Reply