Header Ads
Header Ads
Breaking News

ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ಕಡ್ಡಾಯ, ಮಕ್ಕಳ ರಕ್ಷಣಾ ಹಕ್ಕು ಆಯೋಗದ ಅಧ್ಯಕ್ಷೆ ಕೃಪಾ ಆಳ್ವಾ


ರಾಜ್ಯ ಮಕ್ಕಳ ರಕ್ಷಣಾ ಹಕ್ಕು ಆಯೋಗದ ಅಧ್ಯಕ್ಷೆ ಕೃಪಾ ಆಳ್ವಾ ಸರ್ಕಾರಿ ಶಾಲೆಗಳ ಬಲವರ್ಧನೆ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಇಲಾಖೆಗಳ ಅಧಿಕಾರಿಗಳು, ಶಾಲಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಮಕ್ಕಳ ರಕ್ಷಣಾ ಹಕ್ಕು ಆಯೋಗದ ಅಧ್ಯಕ್ಷೆ ಕೃಪಾ ಆಳ್ವಾ ಮಾತನಾಡಿ, ಸರ್ಕಾರಿ ಶಾಲೆಯ ಕುರಿತು ಹಲವು ದೂರು ಬರುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಸರ್ಕಾರಿ ಶಾಲೆಗಳಲಿರುವ ಕೊರತೆಗಳನ್ನು ಪಟ್ಟಿ ಮಾಡಿ ಪರಿಹಾರ ಸೂಚಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಾಗೂ ಶಾಲಾ ಮುಖ್ಯಸ್ಥರಿಗೆ ದೊಡ್ಡ ಜವಾಬ್ದಾರಿ ಇತರ ಇಲಾಖೆಗಳಿಗಿಂತ ಹೆಚ್ಚಿಗೆ ಇದ್ದು ಮಕ್ಕಳು ಶಾಲೆಯಿಂದ ದೂರ ಉಳಿಯದಂತೆ ನೋಡಿಕೊಳ್ಳಿ ಸಿಎಸ್‌ಆರ್ ಅಡಿ ಸೌಲಭ್ಯ ಪಡೆಯಿರಿ ಮತ್ತು ಇನ್ನೊಂದು ತಿಂಗಳಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ೬೦೬ ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿ ಈ ಆ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪಡಿಸುವತ್ತ ಗಮನ ಹರಿಸಿ ಎಂದರು.
ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಮುಖ್ಯಸ್ಥರು ಶಿಕ್ಷಕರ ಕೊರತೆ, ಶೌಚಾಲಯ ದುರಸ್ಥಿ, ಶೌಚಾಲಯಕ್ಕೆ ಬೇಕಾಗುವ ಸಲಕರಣೆಗೆ ಅನುದಾನ ಇಲ್ಲದಿರುವುದು ಹೀಗೆ ಹಲವು ಸಮಸ್ಯೆ ಕೃಪಾ ಆಳ್ವಾ ಅವರ ಗಮನಕ್ಕೆ ತಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ, ಶಿಕ್ಷಣಾಧಿಕಾರಿ ದಿವಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply