Header Ads
Breaking News

ಎಲ್ಲೆಡೆ ಬಿಜೆಪಿ ಸಾಮೂಹಿಕ ನಾಯಕತ್ವಕ್ಕೆ ಜಯ ಸಿಗುತ್ತಿದೆ- ನಳಿನ್ ಕುಮಾರ್ ಕಟೀಲ್

ದೇಶದಲ್ಲಿ ಪರಿವರ್ತನೆಯ ಗಾಳಿಯನ್ನು ಕಾಣಬಹುದು. ಎಲ್ಲೆಡೆ ನಿರೀಕ್ಷೆ ಮೀರಿ ಬಿಜೆಪಿಗೆ ಜಯ ಲಭಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ವಿಜಯೋತ್ಸವ ಆಚರಿಸಿ ಅವರು ಮಾತನಾಡಿದರು.ಎಲ್ಲೆಡೆ ಬಿಜೆಪಿ ಸಾಮೂಹಿಕ ನಾಯಕತ್ವ ಕ್ಕೆ ಜಯ ಸಿಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಹಾಗೂ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಮಂತ್ರಕ್ಕೆ ಜನ ಆಶೀರ್ವಾದ ಮಾಡಿದ್ದಾರೆ.ವಿಪಕ್ಷಗಳು ಟೀಕೆ ಮಾಡಿದರೂ, ಜನರ ಒಲವು ಬಿಜೆಪಿಯತ್ತ ಇದೆ ಎಂದರು.

Related posts

Leave a Reply

Your email address will not be published. Required fields are marked *