Header Ads
Header Ads
Breaking News

ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರವರು ರಜತ ಸಂಭ್ರಮ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ.

ಸಹಕಾರಿ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸಾರ್ಥಕ ಸೇವೆಯ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಮಂಗಳೂರಿನ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ನಡೆಯಿತು.
ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಆಮಂತ್ರಣ ಪತ್ರಿಕೆಯ ಬಿಡುಗಡೆಯ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರಿ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರು ನಿಜವಾಗಿಯೂ ಅಭಿನಂದನೆಗೆ ಅರ್ಹ ವ್ಯಕ್ತಿ ಎಂದು ಹೇಳಿದರು.ಆನಂತರ ಶಾಸಕರಾದ ವೇದವ್ಯಾಸ ಕಾಮತ್ ಮಾತನಾಡಿ ಸಹಕಾರಿ ಕ್ಷೇತ್ರವನ್ನು ಬೆಳೆಸಲು ನಿರಂತರ ಸಹಕಾರವನ್ನು ಕೊಟ್ಟು ಜಿಲ್ಲೆ ಮತ್ತು ರಾಜ್ಯದ ಹೆಸರನ್ನು ಶಿಖರಕ್ಕೆ ಏರಿಸಿದಂತಹ ವ್ಯಕ್ತಿಗೆ ಅಭಿನಂದನಾ ಕಾರ್ಯಕ್ರಮ ನಡೆಸುವುದು ನನ್ನ ರಾಜ್ಯ ಮತ್ತು ನನ್ನ ನಗರಕ್ಕೆ ಹೆಮ್ಮೆಯ ವಿಚಾರ. ಇಡೀ ಸರ್ಕಾರವೇ ಭಾಗವಹಿಸುವಂತಹಾ ಒಂದು ಅದ್ದೂರಿ ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.ಈ ಸಂದರ್ಭ ರಜತ ಸಂಭ್ರಮ ಅಭಿನಂದನಾ ಸಮಿತಿಯ ಗೌರವ ಅಧ್ಯಕ್ಷರಾದ ಕೆ. ಅಮರನಾಥ ಶೆಟ್ಟಿ, ಅಧ್ಯಕ್ಷರಾದ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಬೆಳಪು, ಕಾರ್ಯಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಭಾಸ್ಕರ್ ಎಸ್,ಕೋಟ್ಯಾನ್, ಸ್ವಾಗತ ಸಮಿತಿಯ ಸಂಚಾಲಕರಾದ ಸವಣೂರು ಸೀತಾರಾಮ ರೈ ಮತ್ತಿತರ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.

Related posts

Leave a Reply