Header Ads
Breaking News

ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ಎಡವಟ್ಟು : ಬಂಟ್ವಾಳದ ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಬಂಟ್ವಾಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ವಿದ್ಯಾರ್ಥಿಗಳಿಗೆ ಆಗಿರುವ ಸಮಸ್ಯೆಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳದ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಕೋವಿಡ್ ಕಾರಣದಿಂದ ವಿಳಂಬವಾಗಿ ಪರೀಕ್ಷೆ ಆರಂಭವಾದರೂ ವಿದ್ಯಾರ್ಥಿಗಳು ಸಮರ್ಥವಾಗಿ ಪರೀಕ್ಷೆಯನ್ನು ಎದುರಿಸಿದ್ದಾರೆ. ಆದರೆ ಪ್ರಶ್ನೆ ಪತ್ರಿಕೆ ಮೌಲ್ಯ ಮಾಪನದಲ್ಲಿ ಲೋಪವಾಗಿರುವುದು ಮೇಲ್ನೊಟಕ್ಕೆ ಕಂಡು ಬಂದಿದೆ. ಪರೀಕ್ಷಾ ಫಲಿತಾಂಶದಲ್ಲಿ ಅನುತೀರ್ಣರಾದ ದ.ಕ. ಮತ್ತು ಉಡುಪಿ ಜಿಲ್ಲೆಯ 748 ವಿದ್ಯಾರ್ಥಿಗಳು ಮರುಮೌಲ್ಯಮಾಪನದಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಮೌಲ್ಯ ಮಾಪಕರ ಬೇಜವಬ್ದಾರಿಯನ್ನು ತೋರಿಸುತ್ತದೆ.

ಮೌಲ್ಯಮಾಪಕರ ಎಡವಟ್ಟಿನಿಂದಾಗಿ ಅನೇಕ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಅಂತಹ ಮೌಲ್ಯಮಾಪಕರನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡೊದರು. ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಂಘಟನೆಯ ಪ್ರಮುಖರಾದ ಶೇಖರ್ ಬಿ., ಸುರೇಶ್ ಕುಮಾರ್ ಬಂಟ್ವಾಳ, ಪ್ರಭಾಕರ ದೈವಗುಡ್ಡೆ, ಹಾರೂನ್ ರಶೀದ್, ಪ್ರಕಾಶ್ ಶೆಟ್ಟಿ ಮತ್ತಿತರರು ಹಾಜರಿದ್ದರು.

Related posts

Leave a Reply

Your email address will not be published. Required fields are marked *