Header Ads
Breaking News

ಎಸ್‍ಎಸ್‍ಎಲ್‍ಸಿ ಫಲಿತಾಂಶ ಉನ್ನತೀಕರಣ : ಶಾಸಕ ಉಮಾನಾಥ್ ಕೋಟ್ಯಾನ್ ನೇತೃತ್ವದಲ್ಲಿ ಸಭೆ

ಮೂಡುಬಿದಿರೆ : ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನು ಉತ್ತೀರ್ಣರಾಗಿಸಲು ಶಿಕ್ಷಕರು ನಿಗಾವಿರಿಸುವುದು ಮುಖ್ಯ. ಶಿಕ್ಷಕರು ಪ್ರಾಮಾಣಿಕವಾಗಿ ನಿಷ್ಠೆಯಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದಾಗ ಫಲಿತಾಂಶ ಹೆಚ್ಚಾಗಲು ಸಾಧ್ಯ. ಪರೀಕ್ಷೆ ಸಂದರ್ಭದಲ್ಲಿ ಪೋಷಕರು ಕೂಡ ಹೆಚ್ಚು ಅಲರ್ಟ್ ಆಗಬೇಕಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್, ಟಿ.ವಿಯಿಂದ ದೂರವಿದ್ದು, ಕಲಿಕೆಗೆ ಹೆಚ್ಚಿನ ಒತ್ತು ನೀಡುವಂತೆ ಪೋಷಕರು ಗಮನಹರಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. 

ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಉನ್ನತೀಕರಿಸುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಮಿಜಾರಿನಲ್ಲಿ ನಡೆದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು. ಮೂಡುಬಿದಿರೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಎಂ., ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಿಸಲು ತಮ್ಮ ವಲಯದಲ್ಲಿ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರು.

ಎಸ್‍ಎಸ್‍ಎಲ್‍ಸಿ ನೋಡಲ್ ಅಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಮಂಗಳೂರು ವಿಭಾಗದ ಅಧ್ಯಕ್ಷ ಜಯಶ್ರೀ, ಮೂಡುಬಿದಿರೆ ತಾಲೂಕಿನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ರಾವ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ರಾಮಕೃಷ್ಣ ಶೀರೂರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *